ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗನ್ ಅಣೆಕಟ್ಟಿಗೆ ಭಾರತದ ನೆರವು

Last Updated 24 ನವೆಂಬರ್ 2020, 20:57 IST
ಅಕ್ಷರ ಗಾತ್ರ

ನವದೆಹಲಿ: ಅಫ್ಗಾನಿಸ್ತಾನದ ಕಾಬೂಲ್‌ ಬಳಿ, ಕಾಬೂಲ್ ನದಿಗೆ ಶಾಹತೂತ್ ಅಣೆಕಟ್ಟು ಕಟ್ಟಲು ಭಾರತವು ನೆರವು ನೀಡಲಿದೆ. ಈ ಸಂಬಂಧ ಎರಡೂ ದೇಶಗಳ ನಡುವಣ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.

ಕಾಬೂಲ್ ನದಿಗೆ ಅಣೆಕಟ್ಟು ಕಟ್ಟುವುದನ್ನು ಪಾಕಿಸ್ತಾನವು ವಿರೋಧಿಸುತ್ತಲೇ ಇತ್ತು. ಈಗ ಒಪ್ಪಂದ ಆಗಿರುವುದರಿಂದಪಾಕಿಸ್ತಾನವು ಮತ್ತೆ ಆಕ್ಷೇಪ ವ್ಯಕ್ತಪಡಿಸುವ ಸಾಧ್ಯತೆ ಇದೆ.

‘ತಾಲಿಬಾನ್ ಉಗ್ರರ ಹಾವಳಿಯಿಂದ ತತ್ತರಿಸಿದ್ದ ಅಫ್ಗಾನಿಸ್ತಾನವನ್ನು ಮರುನಿರ್ಮಿಸುವ ಯೋಜನೆಯ ಭಾಗವಾಗಿ ಭಾರತವು ಈ ಅಣೆಕಟ್ಟು ನಿರ್ಮಾಣಕ್ಕೆ ಬೆಂಬಲ ನೀಡಿದೆ. ಅಫ್ಗಾನಿಸ್ತಾನದ 34 ಪ್ರಾಂತಗಳಲ್ಲೂ ಭಾರತವು ಈಗಾಗಲೇ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಇದಕ್ಕಾಗಿ ಈವರೆಗೆ₹ 22,200 ಕೋಟಿ ವೆಚ್ಚ ಮಾಡಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಈಗ, ₹ 592 ಕೋಟಿ ವೆಚ್ಚದಲ್ಲಿ ಇನ್ನೂ 100 ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ’ ಎಂದಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT