ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇಂಡಿಯಾ’ದ ಮೂರನೇ ಸಭೆಯಲ್ಲಿ ಇವಿಎಂ ಬಗ್ಗೆ ಚರ್ಚೆ?

Published 9 ಆಗಸ್ಟ್ 2023, 15:24 IST
Last Updated 9 ಆಗಸ್ಟ್ 2023, 15:24 IST
ಅಕ್ಷರ ಗಾತ್ರ

ನವದೆಹಲಿ: ಮುಂಬೈನಲ್ಲಿ ಆ. 31 ಹಾಗೂ ಸೆ. 1ರಂದು ನಡೆಯಲಿರುವ ‘ಇಂಡಿಯಾ’ ಮೈತ್ರಿಕೂಟದ ಮೂರನೇ ಸಭೆಯಲ್ಲಿ ಉದ್ದೇಶಪೂರ್ವಕವಾಗಿ ವಿದ್ಯುನ್ಮಾನ ಮತದಾನ ಯಂತ್ರಗಳ (ಇವಿಎಂ) ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ಬುಧವಾರ ಮೂಲಗಳು ಹೇಳಿವೆ. 

ಈ ಹಿಂದೆಯೂ ಹಲವು ವಿರೋಧಪಕ್ಷಗಳು ಇವಿಎಂ ಬಳಕೆಯ ಕುರಿತು ತಮ್ಮ ಕಳವಳ ವ್ಯಕ್ತಪಡಿಸಿದ್ದವು. ಇವಿಎಂಗಳಲ್ಲಿ ಚಲಾಯಿಸಿದ ಮತಗಳು ಆಡಳಿತಾರೂಢ ಬಿಜೆಪಿಯ ಪರವಾಗಿಯೇ ಚಲಾವಣೆಯಾಗುವಂತೆ ಕುಶಲತೆಯಿಂದ ರೂಪಿಸಲಾಗಿದೆ ಎಂದೂ ಕೆಲ ಪಕ್ಷಗಳು ಆರೋಪಿಸಿದ್ದವು. ಆದರೆ, ಈ ಆರೋಪವನ್ನು ಚುನಾವಣಾ ಆಯೋಗವು ಪದೇ ಪದೇ ನಿರಾಕರಿಸುತ್ತಲೇ ಬಂದಿದೆ. 

ಜುಲೈ 17 ಮತ್ತು 18ರಂದು ಬೆಂಗಳೂರಿನಲ್ಲಿ ನಡೆದ ‘ಇಂಡಿಯಾ’ದ ಎರಡನೇ ಸಭೆಯಲ್ಲಿ ಚರ್ಚಿಸಲು ‘ಇವಿಎಂ ಸಮಸ್ಯೆ ಹಾಗೂ ಚುನಾವಣಾ ಆಯೋಗಕ್ಕೆ ಸುಧಾರಣೆಯ ಸೂಚನೆಗಳು’ ಎನ್ನುವ ಕರಡು ಕಾರ್ಯಸೂಚಿಯನ್ನು 26 ಪಕ್ಷಗಳಿಗೆ ನೀಡಲಾಗಿತ್ತು. ಆದರೆ, ಇದು ಅಂತಿಮ ಕಾರ್ಯಸೂಚಿಯಾಗಿ ಕಾರ್ಯರೂಪಕ್ಕೆ ಬಂದಿರಲಿಲ್ಲ ಎಂದು ಮೂಲಗಳು ಹೇಳಿವೆ. 

ಆದಾಗ್ಯೂ, ಮುಂಬೈನಲ್ಲಿ ನಡೆಯಲಿರುವ ಸಭೆಯು ಸಮನ್ವಯ ಸಮಿತಿ, ಜಂಟಿ ಕಾರ್ಯದರ್ಶಿ ಮತ್ತು ಸಂವಹನದಂತಹ ವಿವಿಧ ಅಂಶಗಳ ಸಮಿತಿಗಳನ್ನು ರಚಿಸುವುದರ ಜೊತೆಗೆ ಇತರ ಸಮಸ್ಯೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT