ನವದೆಹಲಿ: ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟವು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ವಾಗ್ದಂಡನೆ ಮಂಡಿಸಲು ಚಿಂತನೆ ನಡೆಸಿದೆ.

ಈ ಮೂಲಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಮತ್ತು ‘ಮತ ಕಳವು’ ವಿರುದ್ಧದ ಪ್ರತಿಭಟನೆಯನ್ನು ತೀವ್ರಗೊಳಿಸಲು ಸಜ್ಜಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೋಮವಾರ ನಡೆದ ‘ಇಂಡಿಯಾ’ ಕೂಟದ ಸಂಸದೀಯ ನಾಯಕರ ಸಭೆಯಲ್ಲಿ ಈ ಪ್ರಸ್ತಾವವನ್ನು ಇಡಲಾಗಿತ್ತು. ಇದಕ್ಕೆ ಸಭೆಯಲ್ಲಿ ಪಾಲ್ಗೊಂಡ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂಗಾರು ಅಧಿವೇಶನದಲ್ಲಿ ಎಸ್ಐಆರ್ ವಿರುದ್ಧದ ಪ್ರತಿಭಟನೆಯನ್ನು ಮುಂದುವರಿಸಬೇಕೆ ಅಥವಾ ಬೇಡವೆ ಎಂಬ ಬಗ್ಗೆ ಸಭೆಯಲ್ಲಿ ಸಂಸದೀಯ ನಾಯಕರು ಚರ್ಚಿಸಿದರು. ಈ ಸಂದರ್ಭದಲ್ಲಿ, ಜ್ಞಾನೇಶ್ ಕುಮಾರ್ ಅವರು ಭಾನುವಾರ ನಡೆಸಿದ್ದ ಮಾಧ್ಯಮಗೋಷ್ಠಿಯು ‘ವಿರೋಧ ಪಕ್ಷಗಳ ವಿರುದ್ಧ ಯುದ್ಧ ಸಾರಿದಂತಿತ್ತು’ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಆಗ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಸಿಇಸಿ ವಿರುದ್ಧ ವಾಗ್ದಂಡನೆ ಮಂಡಿಸುವ ಬಗ್ಗೆ ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಪ್ರಕ್ರಿಯೆಗಳ ಕುರಿತು ಎತ್ತಿರುವ ಪ್ರಶ್ನೆಗಳಿಗೆ ಆಯೋಗ ಉತ್ತರ ನೀಡಿಲ್ಲ. ಹೀಗಾಗಿ ಆಯೋಗ ವಿರುದ್ಧದ ಪ್ರತಿಭಟನೆಯನ್ನು ಮುಂದುವರಿಸುವ ಅಗತ್ಯವಿದೆ ಎಂದು ಸಂಸದೀಯ ನಾಯಕರು ಅಭಿಪ್ರಾಯಪಟ್ಟರು ಎಂದು ತಿಳಿಸಿವೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು, ‘ಜ್ಞಾನೇಶ್ ಕುಮಾರ್ ಅವರು ಭಾನುವಾರ ನಡೆಸಿದ್ದ ಮಾಧ್ಯಮಗೋಷ್ಠಿಯು ಮುಖ್ಯ ಚುನಾವಣಾ ಆಯುಕ್ತರು ನಡೆಸಿದ ಸುದ್ದಿಗೋಷ್ಠಿಯಂತೆ ಇರಲಿಲ್ಲ. ಬಿಜೆಪಿಯ ರಾಜಕಾರಣಿಯೊಬ್ಬರು ಮಾತನಾಡಿದಂತಿತ್ತು’ ಎಂದು ಆರೋಪಿಸಿದರು.

‘ಮಾಧ್ಯಮಗಳು ಪ್ರಶ್ನೆ ಕೇಳಿದಾದಗಲೆಲ್ಲಾ ಅವರು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಂತೆ ವರ್ತಿಸುತ್ತಿದ್ದರು. ಅವರ ನಡುವಿನ ವ್ಯತ್ಯಾಸ ಏನು?’ ಎಂದು ಕೇಳಿದರು.

ಮತ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏಳು ದಿನಗಳ ಒಳಗಾಗಿ ಲಿಖಿತ ಪ್ರಮಾಣಪತ್ರ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಆಧಾರರಹಿತ ಆರೋಪ ಮಾಡಿದ್ದಕ್ಕಾಗಿ ದೇಶದ ಮುಂದೆ ಕ್ಷಮೆಯಾಚಿಸಬೇಕು ಎಂದು ಆಯೋಗ ಭಾನುವಾರ ಆಗ್ರಹಿಸಿದೆ.

ಬಿಜೆಪಿ ವಕ್ತಾರರಂತೆ ಸಿಇಸಿ ವರ್ತನೆ: ವಿಪಕ್ಷಗಳು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಭಾನುವಾರ ಆರೋಪಿಸಿದವು. ಕಾಂಗ್ರೆಸ್ ಟಿಎಂಸಿ ಎಸ್ಪಿ ಡಿಎಂಕೆ ಆರ್ಜೆಡಿ ಸೇರಿದಂತೆ ಎಂಟು ಪ್ರಮುಖ ವಿರೋಧ ಪಕ್ಷಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದವು. ಜ್ಞಾನೇಶ್ ಅವರು ಪ್ರಶ್ನೆಗಳಿಗೆ ಉತ್ತರಿಸುವ ಬದಲು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಎಸ್ಐಆರ್ ಮತ್ತು ಮತದಾರರ ಪಟ್ಟಿಯ ಅಕ್ರಮಗಳ ಕುರಿತ ಪ್ರಶ್ನೆಗಳಿಗೆ ಉತ್ತರಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಹೇಳಿದವು. ಸಮಾಜವಾದಿ ಪಕ್ಷದ ನಾಯಕ ರಾಮಗೋಪಾಲ್ ಯಾದವ್ ಅವರು ‘ರಾಹುಲ್ ಗಾಂಧಿ ಅವರಿಗೆ ಲಿಖಿತ ಪ್ರಮಾಣಪತ್ರ ಸಲ್ಲಿಸಲು ಸೂಚಿಸಲಾಗಿದೆ. ಆದರೆ 2022ರಲ್ಲಿ 18000 ಮತದಾರರ ಹೆಸರನ್ನು ಅಳಿಸಿಹಾಕಿರುವ ಬಗ್ಗೆ ಸಮಾಜವಾದಿ ಪಕ್ಷವು ಪ್ರಮಾಣಪತ್ರ ಸಲ್ಲಿಸಿದೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.

ಸಿಇಸಿ ಪದಚ್ಯುತಿ ಹೇಗೆ?

ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳಂತೆ ಸಿಇಸಿ ಅವರನ್ನೂ ವಾಗ್ದಂಡನೆ ಪ್ರಕ್ರಿಯೆ ಮೂಲಕ ಮಾತ್ರ ಪದಚ್ಯುತಿ ಮಾಡಬಹುದು. ಸಂವಿಧಾನದ 325 (5)ರ ಪ್ರಕಾರ ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ಶಿಫಾರಸಿನ ಮೂಲಕ ಚುನಾವಣಾ ಆಯುಕ್ತರನ್ನು ಪದಚ್ಯುತಗೊಳಿಸಬಹುದು.

ಸಂವಿಧಾನವು ಪ್ರಜೆಗಳಿಗೆ ನೀಡಿರುವ ಮತದಾನದ ಹಕ್ಕನ್ನು ಆಯೋಗ ರಕ್ಷಿಸಬೇಕು. ಆದರೆ ಅದು ತನ್ನ ಹೊಣೆಗಾರಿಕೆಗಳಿಂದ ನುಣುಚಿಕೊಳ್ಳುತ್ತಿದೆ
-ಗೌರವ್ ಗೊಗೋಯ್ ಕಾಂಗ್ರೆಸ್ ನಾಯಕ

ಕಳೆದ ಲೋಕಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ ದೋಷಗಳು ಇದ್ದವು ಎನ್ನುವುದಾದರೆ ಲೋಕಸಭೆಯನ್ನೇ ವಿಸರ್ಜಿಸಬೇಕು
-ಮಹುವಾ ಮೊಯಿತ್ರಾ ಟಿಎಂಸಿ ಸಂಸದೆ
.ಮತಗಳ್ಳತನ ಆರೋಪಕ್ಕೆ ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಿ: ರಾಹುಲ್ಗೆ ಚುನಾವಣಾ ಆಯೋಗ.ದೇಶದಾದ್ಯಂತ ವಿಧಾನಸಭೆ–ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ: ರಾಹುಲ್.ಮತಗಳ್ಳತನ: ಮತ್ತೊಂದು ವಿಡಿಯೊ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ.ಎಸ್ಐಆರ್ ‘ಮತಗಳ್ಳತನ’ದ ಹೊಸ ಅಸ್ತ್ರ: ರಾಹುಲ್ ಗಾಂಧಿ ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.