‘ಕೇಂದ್ರೀಯ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ವಿರೋಧ ಪಕ್ಷಗಳನ್ನು ನಿಯಂತ್ರಿಸಲು ಮತ್ತು ಹೆಚ್ಚು ದೇಣಿಗೆ ಸಂಗ್ರಹಿಸಿಕೊಳ್ಳಲು ಬಿಜೆಪಿ ಬಳಸಿಕೊಳ್ಳುತ್ತಿದೆ’ ಎಂದು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ‘ಇಂಡಿಯಾ’ ಒಕ್ಕೂಟ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು. ‘ಅಧಿಕಾರ ಹೋಗಿಬಿಡುತ್ತದೆ ಎಂಬ ಭಯದಲ್ಲಿ ಇಡಿ, ಐಟಿ ಮತ್ತು ಸಿಬಿಐಗಳನ್ನು ಪ್ರಧಾನಿ ಮೋದಿ ಬಳಸಿಕೊಳ್ಳುತ್ತಿದ್ದಾರೆ. ಈ ಜಗತ್ತಿನಲ್ಲಿಯೇ ಬಿಜೆಪಿಯವರು ಹೇಳಿದಷ್ಟು ಸುಳ್ಳು ಯಾರೂ ಹೇಳಿಲ್ಲ. ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಇಡೀ ವಿಶ್ವವೇ ಬಿಜೆಪಿಯನ್ನು ಟೀಕಿಸುತ್ತಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.