ಮೈತ್ರಿಗೆ ಮಮತಾ ಆಧಾರಸ್ಥಂಭ: ಕಾಂಗ್ರೆಸ್
‘ಮಮತಾ ಬ್ಯಾನರ್ಜಿ ಅವರು ಇಲ್ಲದೆ ಇಂಡಿಯಾ ಮೈತ್ರಿಕೂಟದ ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ. ಅಸ್ಸಾಂನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ‘ತೃಣಮೂಲ ಕಾಂಗ್ರೆಸ್ ಪಕ್ಷವು ಮೈತ್ರಿಕೂಟದ ಪ್ರಮುಖ ಆಧಾರಸ್ಥಂಭ’ ಎಂದು ಹೇಳಿದರು. ‘ಮಮತಾ ಬ್ಯಾನರ್ಜಿ ಅವರನ್ನು ಬಿಟ್ಟು ಇಂಡಿಯಾ ಮೈತ್ರಿಕೂಟ ಇಲ್ಲ. ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದಲ್ಲಿ ಸ್ಪರ್ಧಿಸಲಿದ್ದು, ಎಲ್ಲರೂ ಒಗ್ಗಟ್ಟಿನಿಂದ ಸಾಗಲಿದ್ದೇವೆ’ ಎಂದು ತಿಳಿಸಿದರು.