ನವದೆಹಲಿ: ಮಹಿಳಾ ಮೀಸಲಾತಿ ಹೆಸರಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೊಮ್ಮೆ ಲೋಕಸಭೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಸೂದೆ ಜಾರಿಗೆ ತರುವ ಸಾಧ್ಯತೆ ಇರುವುದರಿಂದ, ಇದರ ವಿರುದ್ಧ ಕಾರ್ಯತಂತ್ರ ರೂಪಿಸಲು ಈ ಮಾಸಾಂತ್ಯದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಮೇ 4ರಂದು ಪ್ರಕಟಗೊಳ್ಳುವ ಚುನಾವಣಾ ಫಲಿತಾಂಶದ ನಂತರವೇ, ನವದೆಹಲಿಯಲ್ಲಿ ಆಯೋಜಿಸಲು ಉದ್ದೇಶಿಸಿರುವ ಈ ಸಭೆಯ ವಿಚಾರ ಅಂತಿಮಗೊಳ್ಳಲಿದೆ. ಕಳೆದ ತಿಂಗಳು ಲೋಕಸಭೆಯಲ್ಲಿ ಬಿಜೆಪಿ ಮಂಡಿಸಿದ್ದ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಸೋಲಿಸಿದ್ದವು. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಮೈತ್ರಿಕೂಟದ ಪಕ್ಷಗಳೇ ಪರಸ್ಪರ ವಿರುದ್ಧವಾಗಿ ಸ್ಪರ್ಧಿಸಿರುವುದರಿಂದ ಲೆಕ್ಕಾಚಾರ ಬದಲಾಗಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ಇಂಡಿಯಾ ಮೈತ್ರಿಕೂಟದಲ್ಲಿ ನಾಯಕತ್ವದ ವಿಚಾರದಲ್ಲಿ ಹೊಸ ಬೇಡಿಕೆಯನ್ನು ಎತ್ತಬಹುದು. ಕೇರಳದಲ್ಲೂ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರವೇ ಸಿಪಿಎಂ ನಿಲುವು ಸ್ಪಷ್ಟವಾಗಲಿದೆ ಎಂದು ಮೂಲಗಳು ಹೇಳಿವೆ.

‘ಅವರು ಸೋಲಿನಿಂದ ಬಳಲುತ್ತಿದ್ದಾರೆ, ಆದರೆ,ಮಸೂದೆ ಜಾರಿಗೆ ತರುವುದನ್ನು ಅಷ್ಟು ಸುಲಭವಾಗಿ ಕೈಬಿಡುವುದಿಲ್ಲ. ಹಾಗಾಗಿ ನಾವು ಇದರ ವಿರುದ್ಧ ಕಾರ್ಯತಂತ್ರ ಸಿದ್ಧವಾಗಿ ಇಟ್ಟುಕೊಂಡಿರಬೇಕು’ ಎಂದು ವಿರೋಧ ಪಕ್ಷದ ಮುಖಂಡರೊಬ್ಬರು ಹೇಳಿದ್ದಾರೆ.

‘ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು 2029ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲು ಬಿಜೆಪಿ ಯತ್ನಿಸುತ್ತಿದೆ. ನಾವು ಇದರ ಹಿಂದಿನ ಉದ್ದೇಶ ಅರಿತಿದ್ದೇವೆ. ಸಮಾಜವಾದಿ ಪಕ್ಷವು ಮಿತ್ರಪಕ್ಷಗಳೊಂದಿಗೆ ಕೈಜೋಡಿಸದೇ ಇರಬಹುದು, ಚುನಾವಣಾ ಪ್ರಚಾರದ ಕಾರಣದಿಂದ ಟಿಎಂಸಿ ಮತ್ತು ಡಿಎಂಕೆ ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಗೈರು ಹಾಜರಾಗುತ್ತಾರೆ ಎಂದು ಅವರು ಭಾವಿಸಿದ್ದರು .ಆದರೆ, ಅದು ಫಲಿಸಲಿಲ್ಲ. ವಿರೋಧ ಪಕ್ಷಗಳಲ್ಲಿ ಇಂತಹ ಒಗ್ಗಟ್ಟನ್ನು ಬಿಜೆಪಿ ನಿರೀಕ್ಷಿಸಿರಲಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

‘ಚರ್ಚೆಗೆ ಅವಕಾಶ ಲಭಿಸಿಲ್ಲ‘

ಮಹಿಳಾ ಮೀಸಲು ಕಾನೂನಿಗೆ ತಿದ್ದುಪಡಿ ತರುವ ಸಂವಿಧಾನ (131ನೇ ತಿದ್ದುಪಡಿ) ಮಸೂದೆ–2026 ಅಂಗೀಕಾರಗೊಳ್ಳುವುದನ್ನು ತಡೆದ ನಂತರ, ವಿರೋಧ ಪಕ್ಷಗಳಿಗೆ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಹೆಚ್ಚಿನ ಅವಕಾಶ ಲಭಿಸಿಲ್ಲ ಎಂದು ಮೂಲಗಳು ಹೇಳಿವೆ. ಕಳೆದ ತಿಂಗಳು ಲೋಕಸಭೆಯಲ್ಲಿ ಈ ಮಸೂದೆಗೆ ಮೂರನೇ ಎರಡರಷ್ಟು ಬಹುಮತ ಸಿಗದೆ ವಿಫಲಗೊಂಡಿತು. ಎನ್ಡಿಎ 298 ಮತಗಳನ್ನು ಪಡೆದರೆ ವಿರೋಧ ಪಕ್ಷಗಳು 230 ಮತಗಳನ್ನು ಪಡೆಯಿತು. ಅಸ್ತಿತ್ವದಲ್ಲಿರುವ 543 ಸ್ಥಾನಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.