ನವದೆಹಲಿ: ತಮ್ಮ ಪ್ರದೇಶಗಳಲ್ಲಿ ಪರಸ್ಪರ ದೇಶಗಳ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಭಾರತ ಮತ್ತು ಬಾಂಗ್ಲಾದೇಶ ಪ್ರಕಟಿಸಿವೆ.

ಆನ್‌ಲೈನ್ ಮೂಲಕ ಶನಿವಾರ ನಡೆದ 19ನೇ ಗೃಹ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ನಿರ್ಧಾರಕೈಗೊಳ್ಳಲಾಯಿತು.

ಭಾರತದ ನಕಲಿ ನೋಟುಗಳನ್ನು ಅಕ್ರಮವಾಗಿ ಸಾಗಿಸುವ ಚಟುವಟಿಕೆಗಳನ್ನು ತಡೆಗಟ್ಟಲು ಉಭಯ ದೇಶಗಳ ಭದ್ರತಾ ಪಡೆಗಳು ಪರಸ್ಪರ ಸಹಕಾರ ನೀಡುವುದು ಅಗತ್ಯವಿದೆ. ಈ ನಿಟ್ಟಿನಲ್ಲಿಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗೃಹ ಕಾರ್ಯದರ್ಶಿಗಳು ಚರ್ಚೆ ನಡೆಸಿದರು.

ಭದ್ರತೆ ಮತ್ತು ಗಡಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸಿ ಬಲಪಡಿಸಲು ಉಭಯ ದೇಶಗಳು ಈ ಸಂದರ್ಭದಲ್ಲಿ ಒಪ್ಪಿಗೆ ನೀಡಲಾಯಿತು. ಜತೆಗೆ, ಭಾರತ ಮತ್ತು ಬಾಂಗ್ಲಾದೇಶ ಗಡಿಯಲ್ಲಿ ಬಾಕಿ ಉಳಿದಿರುವ ಬೇಲಿ ಹಾಕುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಕಾನೂನುಬಾಹಿರವಾಗಿ ಗಡಿಯಲ್ಲಿ ನುಸುಳುವುದನ್ನು ತಡೆಗಟ್ಟಲು ಸಮಗ್ರವಾದ ಗಡಿ ನಿರ್ವಹಣೆ ಯೋಜನೆ ಕೈಗೊಳ್ಳುವ ಬಗ್ಗೆ ಉಭಯ ದೇಶಗಳ ಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಚರ್ಚಿಸಿದರು ಎಂದು ಪ್ರಕಟಣೆ ತಿಳಿಸಿದೆ

ಭಾರತದ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಮತ್ತು ಬಾಂಗ್ಲಾದೇಶದ ಗೃಹ ಸಚಿವಾಲಯದ ಹಿರಿಯ ಕಾರ್ಯದರ್ಶಿ ಚರ್ಚೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.