ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ರಾಜ್ಯದ ಸ್ಥಾನಮಾನ: ಸ್ಟಾಲಿನ್

Published 7 ಏಪ್ರಿಲ್ 2024, 8:08 IST
Last Updated 7 ಏಪ್ರಿಲ್ 2024, 8:08 IST
ಅಕ್ಷರ ಗಾತ್ರ

ಪುದುಚೇರಿ: ಕೇಂದ್ರದಲ್ಲಿ ‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮತ್ತು ಹಾಲಿ ಸಂಸದ ವಿ ವೈಥಿಲಿಂಗಂ ಪರ ಚುನಾವಣಾ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಕಾಂಗ್ರೆಸ್ ಮತ್ತು ಡಿಎಂಕೆ ಬದ್ಧವಾಗಿವೆ ಎಂದು ಹೇಳಿದರು.

ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ, ಕೇಂದ್ರದ ಕೈಗೊಂಬೆಯಾಗಿದ್ದಾರೆ ಎಂದ ಸ್ಟಾಲಿನ್, ದೊಡ್ಡ ರಾಜ್ಯಗಳ ಹಕ್ಕುಗಳಷ್ಟೇ ಅಲ್ಲ. ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶಗಳ ಹಕ್ಕುಗಳನ್ನೂ ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

10 ವರ್ಷಗಳ ಬಿಜೆಪಿ ಆಡಳಿತದಲ್ಲಿ ಪುದುಚೇರಿಗೆ ಏನೂ ಸಿಕ್ಕಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

‘ಎಸ್‌ಸಿ, ಎಸ್‌ಟಿ ಮತ್ತು ದುರ್ಬಲ ವರ್ಗದವರ ಕಲ್ಯಾಣಕ್ಕೆ ಮೋದಿ ಏನನ್ನೂ ಮಾಡಿಲ್ಲ. ಕೇವಲ ಧರ್ಮ ಮತ್ತು ಜಾತಿ ಹೆಸರಲ್ಲಿ ಪ್ರಚಾರ ಮಾಡುತ್ತಿದ್ದಾರೆ’ಎಂದು ಅವರು ಹೇಳಿದ್ದಾರೆ.

‘ಕರೈಕಲ್‌ನ ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಶ್ರೀಲಂಕಾದಿಂದ ಬಂಧನಕ್ಕೊಳಗಾಗುತ್ತಿದ್ದಾರೆ. ಮೀನುಗಾರರ ಸಂಕಷ್ಟ ನಿವಾರಣೆಗೆ ಮೋದಿ ಏನು ಕ್ರಮ ಕೈಗೊಂಡಿದ್ದಾರೆ’ ಎಂದೂ ಅವರು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ, ಪುದುಚೇರಿಯಲ್ಲಿ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರಾಡಳಿತ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ. ಮೋದಿ ಆಡಳಿತದಲ್ಲಿ ದೇಶದ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಪುದುಚೇರಿಯ ಏಕೈಕ ಲೋಕಸಭಾ ಕ್ಷೇತ್ರದ ಮತದಾನ ತಮಿಳುನಾಡಿನ ಜೊತೆ ಏಪ್ರಿಲ್ 19ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT