ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶದಲ್ಲಿ ತಾಲಿಬಾನ್‌ ಆಡಳಿತ ಜಾರಿಗೆ ತರಲು ‘ಇಂಡಿ’ ಬಣ ಬಯಸುತ್ತಿದೆ: ಆದಿತ್ಯನಾಥ್‌

Published 27 ಮೇ 2024, 12:51 IST
Last Updated 27 ಮೇ 2024, 12:51 IST
ಅಕ್ಷರ ಗಾತ್ರ

ಮೌ (ಉತ್ತರ ಪ್ರದೇಶ): ದೇಶದಲ್ಲಿ ತಾಲಿಬಾನ್‌ ಆಡಳಿತವನ್ನು ಜಾರಿಗೆ ತರಲು ಮತ್ತು ಮಹಿಳೆಯರನ್ನು ಅವರ ಮನೆಗಳಿಗೆ ಸೀಮಿತಗೊಳಿಸಲು ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಬಯಸುತ್ತಿವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆರೋಪಿಸಿದ್ದಾರೆ.

ಬಿಜೆಪಿ ಮಿತ್ರ ಪಕ್ಷ ಸುಹೇಲ್‌ದೇವ್‌ ಭಾರತೀಯ ಸಮಾಜ ಪಕ್ಷದ ಅಭ್ಯರ್ಥಿ ಅರವಿಂದ ರಾಜಭಾರ್‌ ಪರ ಘೋಸಿ ಕ್ಷೇತ್ರದಲ್ಲಿ ಮತಯಾಚಿಸಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳು ನಕಾರಾತ್ಮಕ ಮನಸ್ಥಿತಿಯನ್ನು ಹೊಂದಿವೆ. ಅವರು ಭಗವಾನ್‌ ರಾಮ ಮತ್ತು ದೇಶ ವಿರೋಧಿ ನಿಲುವನ್ನು ಹೊಂದಿದ್ದಾರೆ. ದಲಿತರು ಮತ್ತು ಹಿಂದುಳಿದ ಸಮುದಾಯಗಳ ಹಕ್ಕುಗಳನ್ನು ನಿರಾಕರಿಸುತ್ತಾರೆ. ಇದೀಗ ಒಬಿಸಿ ಸಮುದಾಯದ ಮೀಸಲಾತಿ ಮೇಲೆ ಅವರ ದೃಷ್ಟಿ ಬಿದ್ದಿದೆ’ ಎಂದು ಹೇಳಿದ್ದಾರೆ.

ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾದ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ಹಂಚುವ ಕುರಿತು ಮಾತನಾಡುಲಾಗುತ್ತಿದೆ. ಆದರೆ, ಇದನ್ನು ಸಾಧ್ಯವಾಗಲು ಬಿಜೆಪಿ ಬಿಡುವುದಿಲ್ಲ. ಈ ಮೀಸಲಾತಿಯು ಒಬಿಸಿ ಸಮುದಾಯಕ್ಕೆ ಸೇರಿದೆ. ಅವುಗಳನ್ನು ಕಸಿದುಕೊಳ್ಳಲು ನಾವು (ಬಿಜೆಪಿ) ಅನುಮತಿಸುವುದಿಲ್ಲ. ಧರ್ಮವು ಮೀಸಲಾತಿಯ ಆಧಾರವಾಗಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್‌ ಅವರು ಪ್ರತಿಪಾದಿಸಿದ್ದಾರೆ ಎಂದು ಆದಿತ್ಯನಾಥ್‌ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಹತ್ತು ವರ್ಷಗಳ ಆಡಳಿತದಲ್ಲಿ ದೇಶದ ಘನತೆ ಮತ್ತು ಪ್ರತಿಯೊಬ್ಬ ಭಾರತೀಯನ ಘನತೆ ಜಾಗತಿಕ ಮಟ್ಟದಲ್ಲಿ ಹೆಚ್ಚಾಗಿದೆ. ದೇಶವು ಈಗ ಉತ್ತಮ ಭದ್ರತೆಯನ್ನು ಹೊಂದಿದೆ ಮತ್ತು ಪ್ರಮುಖ ಅಭಿವೃದ್ಧಿ ಯೋಜನೆಗಳು ಕಾರ್ಯಗತಿಯಲ್ಲಿವೆ. ಬಡವರ ಹಕ್ಕುಗಳನ್ನು ಎತ್ತಿಹಿಡಿಯಲಾಗುತ್ತಿದೆ ಹಾಗೂ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT