ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ: ಜೆ. ಪಿ ನಡ್ಡಾ

Published 11 ಮೇ 2024, 2:46 IST
Last Updated 11 ಮೇ 2024, 2:46 IST
ಅಕ್ಷರ ಗಾತ್ರ

ಚಂಡೀಗಢ: ‘ಇಂಡಿಯಾ’ ಮೈತ್ರಿಕೂಟವು ಮೋಸಗಾರರ ಗುಂಪಾಗಿದೆ ಮತ್ತು ವಂಶಪಾರಂಪರೆಯ ರಾಜಕೀಯವನ್ನು ಉತ್ತೇಜಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣದ ಪಂಚಕುಲದಲ್ಲಿ ಆಯೋಜಿಸಲಾಗಿದ್ದ ರೋಡ್‌ ಶೋನಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಾರೆ. ಆದರೆ, ಭ್ರಷ್ಟರನ್ನು ರಕ್ಷಿಸಿ, ಅವರನ್ನು ಪ್ರವರ್ಧನಮಾನಕ್ಕೆ ತರಲು ‘ಇಂಡಿಯಾ‘ ಮೈತ್ರಿಕೂಟ ಪ್ರಯತ್ನಿಸುತ್ತಿದೆ. ಕಾಂಗ್ರೆಸ್‌ ಹಗರಣಗಳ ಪಕ್ಷವಾಗಿದೆ’ ಎಂದು ಆರೋಪಿಸಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್‌ ಮತ್ತು ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಎಲ್ಲರೂ ಹಗರಣಗಳಲ್ಲಿ ತೊಡಗಿದ್ದಾರೆ. ಇದು ವಂಚಕರ ಸಮೂಹವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈತ್ರಿಕೂಟದ ಅನೇಕ ನಾಯಕರು ಜೈಲಿನಲ್ಲಿದ್ದಾರೆ ಅಥವಾ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಹೇಳಿದ ನಡ್ಡಾ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌, ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್, ಸಮಾಜವಾದಿ ಪಕ್ಷದ ಮಾಜಿ ನಾಯಕ ಅಜಂ ಖಾನ್‌ ಇವರೆಲ್ಲರೂ ಇಂದು ಎಲ್ಲಿದ್ದಾರೆ?, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಮತ್ತು ಲಾಲು ಪ್ರಸಾದ್‌ ಯಾದವ್‌ ಎಲ್ಲರೂ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳು ವಂಶಪಾರಂಪರೆಯ ರಾಜಕೀಯವನ್ನು ಮಾಡುತ್ತಿವೆ. ಅವರಿಗೆ ಜನಪರ ಕಾಳಜಿ ಇಲ್ಲ ಎಂದು ನಡ್ಡಾ ಆರೋಪಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT