ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳೆದ 9.5 ವರ್ಷದಲ್ಲಿ 92 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಸಚಿವಾಲಯ

Published 29 ಫೆಬ್ರುವರಿ 2024, 12:33 IST
Last Updated 29 ಫೆಬ್ರುವರಿ 2024, 12:33 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಒಂಬತ್ತುವರೆ ವರ್ಷದಲ್ಲಿ ದೇಶದಲ್ಲಿ 92 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗಿದ್ದು ಮುಂದಿನ ತಿಂಗಳ ಅಂತ್ಯಕ್ಕೆ ಅದು 95 ಸಾವಿರ ಕಿ.ಮೀ.ಗೆ ತಲುಪಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿ ಅನುರಾಗ್‌ ಜೈನ್‌ ಗುರುವಾರ ಹೇಳಿದ್ದಾರೆ.

ಇಂಟರ್‌ನ್ಯಾಷನಲ್‌ ರೋಡ್‌ ಫೆಡರೇಷನ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೃತಕ ಬುದ್ದಿಮತ್ತೆಯಂತಹ ಆಧುನಿಕ ತಂತ್ರಜ್ಞಾನದ ಮೂಲಕ ಭವಿಷ್ಯದಲ್ಲಿ ಸಾರಿಗೆ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಯೋಜಿಸಲಾಗಿದೆ ಎಂದರು’. 

‘ಮುಂದಿನ 50 ವರ್ಷದಲ್ಲಿ ನಿರೀಕ್ಷಿತ ದಟ್ಟಣೆ ಮತ್ತು ಹೆಚ್ಚುತ್ತಿರುವ ಜನಸಂಖ್ಯೆಯ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ಹೈ ಸ್ಪೀಡ್‌ ಕಾರಿಡಾರ್‌ಗಳನ್ನು ನಿರ್ಮಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನ್ಯೂನ್ಯತೆಗಳನ್ನು ಗುರುತಿಸಲಾಗಿದ್ದು, 2025ರ ಮಾರ್ಚ್‌ ಒಳಗೆ ಅದನ್ನು ಸರಿಪಡಿಸಲಾಗುವುದು’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT