ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಗ್ನಿ–1’ ಕ್ಷಿಪಣಿ ಉಡಾವಣೆ ಯಶಸ್ವಿ

Published 2 ಜೂನ್ 2023, 0:20 IST
Last Updated 2 ಜೂನ್ 2023, 0:20 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಂತರ ವ್ಯಾಪ್ತಿಯ ಬ್ಯಾಲಿಸ್ಟಿಕ್‌ ಕ್ಷಿಪಣಿ ‘ಅಗ್ನಿ–1’ ಉಡಾವಣೆಯನ್ನು ಒಡಿಶಾ ಕರಾವಳಿಯ ಎ.ಪಿ.ಜೆ ಅಬ್ದುಲ್‌ ಕಲಾಂ ದ್ವೀಪದಿಂದ ಗುರುವಾರ ಯಶಸ್ವಿಯಾಗಿ ನೆರವೇರಿಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ತರಬೇತಿ ಉದ್ದೇಶದಿಂದ ಈ ಕ್ಷಿಪಣಿ ಉಡಾವಣೆ ಪರೀಕ್ಷೆಯನ್ನು ನೆರವೇರಿಸಲಾಯಿತು. ಪೂರ್ವ ನಿರ್ಧರಿತ ಗುರಿಯನ್ನು ಧ್ವಂಸಗೊಳಿಸುವ ಮೂಲಕ ಕ್ಷಿಪಣಿ ವ್ಯವಸ್ಥೆಯ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಅಂಶಗಳು ಕ್ರಮಬದ್ಧವಾಗಿವೆ ಎಂಬುದನ್ನು ಈ ಪರೀಕ್ಷೆ ಸಾಬೀತುಪಡಿಸಿತು ಎಂದು ಸಚಿವಾಲಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT