ನವದೆಹಲಿ: ಪೂರ್ವ ಲಡಾಖ್‌ನ ಸಂಘರ್ಷ ಪ್ರದೇಶಗಳಲ್ಲಿ ಬಾಕಿ ಉಳಿದಿರುವ ಸೇನೆಯನ್ನು ವಾಪಸ್ ಕರೆಯಿಸಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವಣ ಮಾತುಕತೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿಲ್ಲ.

ಶನಿವಾರ ಚುಷುಲ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೇನೆಯ ಕಮಾಂಡರ್ ಮಟ್ಟದ 11ನೇ ಸುತ್ತಿನ ಮಾತುಕತೆ ನಡೆಯಿತು.

ಡೆಪ್‌ಸ್ಯಾಂಗ್, ಗೋಗ್ರಾ ಮತ್ತು ಹಾಟ್‌ಸ್ಟ್ರಿಂಗ್ಸ್ ಪ್ರದೇಶದಿಂದ ಸೇನೆಯನ್ನು ವಾಪಸ್ ಕರೆಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಆದರೆ, ಚೀನಾ ತನ್ನ ನಿಲುವು ಸಡಿಲಿಸಲಿಲ್ಲ ಎಂದು ಮೂಲಗಳು ತಿಳಿಸಿವೆ.

ಮಾತುಕತೆ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಸೇನೆ, ‘ಬಾಕಿ ಉಳಿದಿರುವ ಪ್ರದೇಶಗಳಲ್ಲಿನ ಸೇನೆಯನ್ನು ವಾಪಸ್ ಕರೆಯಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಯಾವುದೇ ರೀತಿಯ ಘಟನೆಗಳು ನಡೆಯದಂತೆ ಸ್ಥಿರತೆಯನ್ನು ಕಾಪಾಡಲು ಉಭಯ ದೇಶಗಳು ಒಪ್ಪಿಕೊಂಡಿವೆ. ಜತೆಗೆ, ಬಾಕಿ ಉಳಿದಿರುವ ಬಿಕ್ಕಟುಗಳ ಬಗ್ಗೆ ಶೀಘ್ರ ಇತ್ಯರ್ಥಗೊಳಿಸಲು ಒಪ್ಪಿವೆ’ ಎಂದು ತಿಳಿಸಿದೆ.

ಮಾತುಕತೆಗೆ ಚೀನಾ ಮಿಲಿಟರಿ ಹಿರಿಯ ಅಧಿಕಾರಿಗಳು ಪೂರ್ವ ನಿರ್ಧಾರ ಕೈಗೊಂಡು ಬಂದಿದ್ದರು. ತಮ್ಮ ನಿಲುವುಗಳಲ್ಲಿ ಸಡಿಲಿಕೆ ತೋರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.