ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಡಾನ್ ಸಂಘರ್ಷ: 3,862 ಭಾರತೀಯರ ರಕ್ಷಣೆ, ಆಪರೇಷನ್ ಕಾವೇರಿ ಕಾರ್ಯಾಚರಣೆ ಸ್ಥಗಿತ

Published 5 ಮೇ 2023, 14:50 IST
Last Updated 5 ಮೇ 2023, 14:50 IST
ಅಕ್ಷರ ಗಾತ್ರ

ನವದೆಹಲಿ: ಸುಡಾನ್‌ನಲ್ಲಿ ಸಿಲುಕಿದ್ದ 3,862 ಮಂದಿ ಭಾರತೀಯರನ್ನು ಆಪರೇಷನ್ ಕಾವೇರಿ ಕಾರ್ಯಾಚರಣೆಯಡಿ ಸ್ವದೇಶಕ್ಕೆ ಕರೆತರಲಾಗಿದೆ.

ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಆಪರೇಷನ್‌ ಕಾವೇರಿ’ ಕಾರ್ಯಾಚರಣೆಗೆ ಏಪ್ರಿಲ್ 24ರಂದು ಚಾಲನೆ ನೀಡಿತ್ತು. ಕನ್ನಡಿಗರು ಸೇರಿದಂತೆ ಮೂರು ಸಾವಿರಕ್ಕೂ ಅಧಿಕ ಭಾರತೀಯರು ಅಲ್ಲಿ ಸಿಲುಕಿದ್ದರು. ಅವರನ್ನು ಹಂತ ಹಂತವಾಗಿ ಭಾರತಕ್ಕೆ ಕರೆತರುವ ಕಾರ್ಯ ನಡೆದಿತ್ತು.

'ಆಪರೇಷನ್ ಕಾವೇರಿ' ಅಡಿಯಲ್ಲಿ ಭಾರತೀಯರನ್ನು ಪೋರ್ಟ್ ಸುಡಾನ್‌ ಮಾರ್ಗವಾಗಿ ಸೌದಿ ಅರೇಬಿಯಾದ ನಗರವಾದ ಜೆದ್ದಾಕ್ಕೆ ಕರೆತರಲಾಗುತ್ತಿತ್ತು. ಬಳಿಕ ಅಲ್ಲಿಂದ ಭಾರತೀಯ ವಾಯುಪಡೆಯ (ಐಎಎಫ್) ವಿಮಾನಗಳು ಹಾಗೂ ಭಾರತೀಯ ನೌಕಾಪಡೆಯ ಹಡಗುಗಳ ಮೂಲಕ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು.

ಇದೀಗ ಭಾರತೀಯರನ್ನು ಸ್ಥಳಾಂತರಿಸಲು ಜೆದ್ದಾದಲ್ಲಿ ಕಲ್ಪಿಸಲಾಗಿದ್ದ ಸಾರಿಗೆ ವ್ಯವಸ್ಥೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT