ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ಬರಕಾ ಪರಮಾಣು ವಿದ್ಯುತ್ ಸ್ಥಾವರವನ್ನು ಗುರಿಯಾಗಿಸಿಕೊಂಡು ನಡೆಸಲಾದ ಡ್ರೋನ್ ದಾಳಿಯನ್ನು ‘ಅಪಾಯಕಾರಿ ನಡೆ’ ಎಂದು ಭಾರತ ತೀವ್ರವಾಗಿ ಖಂಡಿಸಿದೆ.

ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯ ಮಧ್ಯೆ, ಭಾರತವು ಎಲ್ಲಾ ದೇಶಗಳಿಗೂ ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಒತ್ತಾಯಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

‘ಯುಎಇಯಲ್ಲಿನ ಬರಕಾ ಪರಮಾಣು ಸ್ಥಾವರವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಬಗ್ಗೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ. ಇಂತಹ ಕ್ರಮಗಳು ಸ್ವೀಕಾರಾರ್ಹವಲ್ಲ. ಇದು ಪರಿಸ್ಥಿತಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡುತ್ತದೆ’ ಎಂದೂ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಇರಾನ್ ವಿರುದ್ಧದ ಅಮೆರಿಕ–ಇಸ್ರೇಲ್ ಯುದ್ಧವನ್ನು ಕೊನೆಗೊಳಿಸುವ ಮತ್ತು ಹೊರ್ಮುಜ್ ಜಲಸಂಧಿಯಲ್ಲಿ ಹಡಗು ಸಂಚಾರವನ್ನು ಪುನರಾರಂಭಿಸಲು ಪ್ರಯತ್ನಗಳ ನಡೆಯುತ್ತಿರುವ ಸಂದರ್ಭದಲ್ಲೇ ಯುಎಇಯ ಪರಮಾಣು ವಿದ್ಯುತ್ ಸ್ಥಾವರದ ಬಳಿ ಡ್ರೋನ್ ದಾಳಿ ನಡೆದಿದ್ದು, ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಮತ್ತು ವಿಕಿರಣ ಸೋರಿಕೆಯ ಅಪಾಯ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ದೇಶದ ಪಶ್ಚಿಮ ಗಡಿ ಭಾಗದಿಂದ ಮೂರು ಡ್ರೋನ್ಗಳು ಹಾರಿ ಬಂದಿದ್ದು, ಅವುಗಳಲ್ಲಿ ಒಂದು ಬರಕಾ ಪರಮಾಣು ವಿದ್ಯುತ್ ಸ್ಥಾವರದ ಒಳ ಆವರಣದ ಹೊರಭಾಗದಲ್ಲಿರುವ ಜನರೇಟರ್ಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ’ ಎಂದು ಯುಎಇಯ ರಕ್ಷಣಾ ಸಚಿವಾಲಯ ತಿಳಿಸಿದೆ.

ಇರಾಕ್ನಲ್ಲಿರುವ ಇರಾನ್ ಬೆಂಬಲಿತ ಸಶಸ್ತ್ರ ಬಂಡುಕೋರರು ಮತ್ತು ಯೆಮನ್ನಲ್ಲಿರುವ ಇರಾನ್ ಬೆಂಬಲಿತ ಹೂಥಿ ಬಂಡುಕೋರರು ಡ್ರೋನ್ಗಳನ್ನು ಹೊಂದಿದ್ದಾರೆ. ಆದರೆ, ಈ ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ.

ಯುಎಇ ರಾಜಧಾನಿ ಅಬುಧಾಬಿಯಿಂದ 200 ಕಿ.ಮೀ. ದೂರದಲ್ಲಿರುವ ಬರಾಕ್ ಪರಮಾಣು ವಿದ್ಯುತ್ ಸ್ಥಾವರ ಸೌದಿ ಅರೇಬಿಯಾ ಮತ್ತು ಕತಾರ್ನ ಗಡಿಯ ಸಮೀಪದಲ್ಲಿದೆ. ಸ್ಥಾವರವು 2020ರಲ್ಲಿ ಕಾರ್ಯಾರಂಭ ಮಾಡಿದೆ.

ಫೆಬ್ರುವರಿ 28ರಂದು ಇರಾನ್ ಮೇಲೆ ಅಮೆರಿಕ, ಇಸ್ರೇಲ್ ಪಡೆಗಳು ವಾಯು ದಾಳಿ ನಡೆಸಿದ್ದವು. ಇದಕ್ಕೆ ಪ್ರತಿಯಾಗಿ ಅಮೆರಿಕ ಸೇನಾ ನೆಲೆಗಳನ್ನು ಹೊಂದಿರುವ ಯುಎಇ ಮತ್ತು ಇತರ ಗಲ್ಫ್ ರಾಷ್ಟ್ರಗಳನ್ನು ಇರಾನ್ ಪದೇ ಪದೇ ಗುರಿಯಾಗಿಸಿಕೊಂಡಿದೆ. ಜತೆಗೆ, ನಾಗರಿಕರು ಮತ್ತು ಇಂಧನ ಮೂಲಸೌಕರ್ಯಗಳನ್ನು ಒಳಗೊಂಡಿರುವ ಸ್ಥಳಗಳ ಮೇಲೂ ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.