ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಾದ್ಯಂತ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ: 116,838 ಹೊಸ ಪ್ರಕರಣ

Last Updated 7 ಜನವರಿ 2022, 3:20 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. 116,838 ಹೊಸ ಪ್ರಕರಣಗಳು ಶುಕ್ರವಾರ ವರದಿಯಾಗಿವೆ.

90,928 ಪ್ರಕರಣಗಳು ಗುರುವಾರ, 58 ಸಾವಿರ ಪ್ರಕರಣಗಳು ಬುಧವಾರ ಬೆಳಕಿಗೆ ಬಂದಿದ್ದವು.

ಮುಂಬೈ, ದೆಹಲಿ ಸೇರಿದಂತೆ ದೇಶದ ಮಹಾನಗರಗಳಲ್ಲಿ ಕೋವಿಡ್‌ ಸೋಂಕು ವೇಗವಾಗಿ ಹರಡುತ್ತಿದೆ. ದೆಹಲಿಯಲ್ಲಿ, ಮಂಗಳವಾರ(5,481), ಬುಧವಾರ(10,665), ಗುರುವಾರ (15,097) ಹೊಸ ಪ್ರಕರಣಗಳು ಪತ್ತೆಯಾಗಿವೆ.

ಮುಂಬೈನಲ್ಲೂ ಇದೇ ರೀತಿಯ ಹೆಚ್ಚಳ ಕಂಡುಬಂದಿದೆ. ಮಂಗಳವಾರ(10,606), ಬುಧವಾರ(15,014), ಗುರುವಾರ(19,780) ಹೊಸ ಪ್ರಕರಣಗಳು ವರದಿಯಾಗಿವೆ.

ಕೋಲ್ಕತ್ತದಲ್ಲಿ ಮಂಗಳವಾರ (4,759), ಬುಧವಾರ (6,170) ಗುರುವಾರ (6,569) ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ಓಮೈಕ್ರಾನ್‌ ರೂಪಾಂತರವು ತೀವ್ರಗತಿಯಲ್ಲಿ ಹರಡುತ್ತಿದೆ. ಆ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ ಕಂಡುಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.

ನವೆಂಬರ್ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ಓಮೈಕ್ರಾನ್‌ ಹಿಂದಿನ ರೂಪಾಂತರಗಳಿಗಿಂತ ಹೆಚ್ಚು ವೇಗದಲ್ಲಿ ಹರಡುತ್ತಿದೆ. ಆದರೆ, ಇದರಿಂದ ಅಧಿಕ ಸಾವುಗಳು ಸಂಭವಿಸುವುದಿಲ್ಲ ಎಂದೂ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇವುಗಳನ್ನೂಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT