ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 547 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ದೇಶದಲ್ಲಿ ಇದುವರೆಗೆ 4,46,66,924 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,30,532 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಪೈಕಿ ಶೇ 0.02 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 99 ಆಗಿದೆ.