ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತ ವೇಗವಾಗಿ ಅಭಿವೃದ್ಧಿ ಪಥದತ್ತ ಸಾಗುವ ಸಾಮರ್ಥ್ಯ ಹೊಂದಿದೆ: ಜೈರಾಮ್‌ ರಮೇಶ್‌

Published 5 ಜೂನ್ 2024, 6:13 IST
Last Updated 5 ಜೂನ್ 2024, 6:13 IST
ಅಕ್ಷರ ಗಾತ್ರ

ನವದೆಹಲಿ: ಭಾರತವು ಸಾಮಾಜಿಕ, ಆರ್ಥಿಕ ಹಾಗೂ ಪರಿಸರ ಸ್ನೇಹಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವೇಗವಾಗಿ ಅಭಿವೃದ್ಧಿ ಪಥದತ್ತ ಸಾಗುವ ಸಾಮರ್ಥ್ಯ ಹೊಂದಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಈ ಸಂಬಂಧ ವಿಶ್ವ ‍ಪರಿಸರ ದಿನದಂದು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು ಯಾವುದೇ ಭಯ ಮತ್ತು ಆತಂಕವಿಲ್ಲದೇ ಸರ್ಕಾರಿ ಸಂಸ್ಥೆಗಳು ಕಾನೂನನ್ನು ಬಲಪಡಿಸಬೇಕು ಎಂದು ಹೇಳಿದ್ದಾರೆ.

ಭಾರತವು ವೇಗವಾಗಿ ಆರ್ಥಿಕ ಅಭಿವೃದ್ಧಿ ಸಾಧಿಸಲು ಅರ್ಹವಾಗಿದೆ. ಈ ಸಮಯದಲ್ಲಿ ದೇಶವು ಆರ್ಥಿಕವಾಗಿ ಮತ್ತಷ್ಟು ಬಲಿಷ್ಟವಾಗುವುದು ಅವಶ್ಯಕ. ಇದು ಅಸಾಧ್ಯವಾದ ಕಾರ್ಯ ಏನಲ್ಲ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ 12 ವರ್ಷಗಳ ಹಿಂದೆಯೇ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆ ಸಚಿವಾಲಯವು ದೆಹಲಿಯಲ್ಲಿ ಹಸಿರು ಕಚೇರಿಯನ್ನು ಪ್ರಾರಂಭಿಸಿತ್ತು ಎಂದು ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT