ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟ್‌ 31 ರವರೆಗೂ ಅಂತರರಾಷ್ಟ್ರೀಯ ವಿಮಾನ ಸೇವೆ ರದ್ದು

Last Updated 31 ಜುಲೈ 2020, 13:54 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಗಳ ನಿರ್ಬಂಧವನ್ನು ಆಗಸ್ಟ್‌ 31 ರವರೆಗೂ ವಿಸ್ತರಿಸಲಾಗಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. ಕಾರ್ಗೊ (ಸರಕು ಮತ್ತು ಸೇವೆ) ಹಾಗೂ ವಾಣಿಜ್ಯ ಸೇವೆಗಳ ವಿಮಾನಗಳ ಹಾರಾಟದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಡಿಜಿಸಿಎ ತಿಳಿಸಿದೆ.

ಜುಲೈ ತಿಂಗಳ ಆರಂಭದಲ್ಲಿ, ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ, ನಾಗರಿಕ ವಿಮಾನಯಾನ ಸಚಿವಾಲಯವು ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿಷೇಧವನ್ನು ಜುಲೈ 31ರವರೆಗೆ ವಿಸ್ತರಿಸಿತ್ತು. ಜಾಗತಿಕವಾಗಿ ಕೋವಿಡ್‌ ಪ್ರಕರಣಗಳಲ್ಲಿ ಇಳಿಕೆಯಾಗದಿರುವುದರಿಂದ ಮತ್ತೆ ಆಗಸ್ಟ್‌ 31ರ ವರೆಗೂ ವಿಸ್ತರಣೆ ಮಾಡಲಾಗಿದೆ.

ಸದ್ಯ, ವಂದೇ ಭಾರತ್‌ ಮಿಷನ್‌ ಅಡಿ ಏರ್‌ ಇಂಡಿಯಾ ಮತ್ತು ಕೆಲ ಖಾಸಗಿ ವೈಮಾನಿಕ ಸಂಸ್ಥೆಗಳು ಕೆಲವೊಂದು ವಿಮಾನ ಸೇವೆಯನ್ನು ಒದಗಿಸುತ್ತಿವೆ. ದೇಶೀಯ ವೈಮಾನಿಕ ಸೇವೆ ಮೇ 25ರಂದು ಪುನರಾರಂಭಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT