ನವದೆಹಲಿ: ಕೋವಿಡ್–19 ಪಿಡುಗಿನ ಕಾರಣದಿಂದಾಗಿ ನಾಗರಿಕ ವಿಮಾನಯಾನ ನಿಯಂತ್ರಕರ ಒಪ್ಪಿಗೆ ಪಡೆದು ಕಾರ್ಯಾಚರಣೆ ನಡೆಸುವ ವಿಮಾನಗಳನ್ನು ಹೊರತುಪಡಿಸಿ, ಉಳಿದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಡಿ.31ರವರೆಗೂ ನಿಷೇಧಿಸಲಾಗಿದೆ.

‘2020ರ ಜೂನ್.26ರಂದು ಹೊರಡಿಸಿರುವ ಸುತ್ತೋಲೆಯ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದ್ದು, ಭಾರತದಿಂದ ಹೊರಡುವ ಮತ್ತು ಭಾರತಕ್ಕೆ ಆಗಮಿಸುವ ಅಂತರರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನಸೇವೆಯನ್ನು ಡಿ.31ರ ರಾತ್ರಿ 11.59ರವರೆಗೆ ನಿಷೇಧಿಸಲಾಗಿದೆ’ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯವು (ಡಿಜಿಸಿಎ) ಉಲ್ಲೇಖಿಸಿದೆ.

‘ಈ ನಿರ್ಬಂಧವು ಸರಕು ಸಾಗಣೆ ವಿಮಾನಗಳಿಗೆ ಹಾಗೂ ಡಿಜಿಸಿಎಯಿಂದ ಒಪ್ಪಿಗೆ ಪಡೆದು ಕಾರ್ಯಾಚರಣೆ ನಡೆಸುವ ವಿಮಾನಗಳಿಗೆ ಅನ್ವಯಿಸುವುದಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೋವಿಡ್–19 ಪಿಡುಗಿನ ಕಾರಣದಿಂದಾಗಿ ಕಳೆದ ಮಾರ್ಚ್ 25ರಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧಿಸಲಾಗಿದೆ. ವಂದೇ ಭಾರತ್ ಮಿಷನ್‌ನಡಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರಲು ಮೇ 7ರಿಂದ ವಿಶೇಷ ವಿಮಾನಗಳನ್ನು ನಿಯೋಜಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.