ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತ–ಫ್ರಾನ್ಸ್‌ ಸೇನಾ ಜಂಟಿ ಸಮರಾಭ್ಯಾಸ

Published 13 ಮೇ 2024, 16:33 IST
Last Updated 13 ಮೇ 2024, 16:33 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಮತ್ತು ಫ್ರಾನ್ಸ್‌ ನಡುವಿನ ಜಂಟಿ ಸೇನಾ ಸಮರಾಭ್ಯಾಸವು ಸೋಮವಾರ ಮೇಘಾಲಯದಲ್ಲಿ ಆರಂಭಗೊಂಡಿತು. ಇದು ಉಭಯ ದೇಶಗಳ ಸೇನಾ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಸೇನಾ ಜಂಟಿ ಸಮರಾಭ್ಯಾಸವು ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಸಹಕಾರದ ಮಟ್ಟವನ್ನು ಹೆಚ್ಚಿಸಲು ಮತ್ತು ದ್ವಿಪಕ್ಷೀಯ ಬಾಂಧವ್ಯವೃದ್ಧಿಗೆ ಸಹಕಾರಿಯಾಗಲಿದೆ.

ಮೇ 13ರಿಂದ 26ರವರೆಗೆ ಎರಡೂ ರಾಷ್ಟ್ರಗಳ ನಡುವೆ ನಡೆಯಲಿರುವ ‘ಶಕ್ತಿ’ ಜಂಟಿ ಸಮರಾಭ್ಯಾಸವು, ಉಭಯ ದೇಶಗಳು ನಡೆಸುವ ಕಾರ್ಯಾಚರಣೆಯ ಅತ್ಯುನ್ನತ ತಂತ್ರಗಾರಿಕೆ, ಕಾರ್ಯವಿಧಾನಗಳಲ್ಲಿ ತಮ್ಮ ಕೌಶಲಗಳನ್ನು ಹಂಚಿಕೊಳ್ಳಲು ಅನುವು ಮಾಡಿಕೊಡಲಿದೆ ಎಂದು ರಕ್ಷಣಾ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT