ಮಾವಿನಹೊಳೆ (ಚನ್ನಗಿರಿ): ‘ಯುದ್ಧದ ಕಾರಣ ತೈಲೋತ್ಪನ್ನಗಳ ಸಮಸ್ಯೆ ಎದುರಾದರೂ ಪ್ರಧಾನಿ ನರೇಂದ್ರ ಮೋದಿ ಅವರು ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ದೇಶದಲ್ಲಿ ಇಂಧನ ಕೊರತೆಯಾಗದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದು ಶಿವಮೊಗ್ಗ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ತಾಲ್ಲೂಕಿನ ಮಾವಿನಹೊಳೆ ಗ್ರಾಮದ ಮಹಾರುದ್ರಸ್ವಾಮಿ ಸಮುದಾಯ ಭವನದಲ್ಲಿ ಶನಿವಾರ ಬಿಜೆಪಿಯಿಂದ ನಡೆದ ಪಂಡಿತ್ ದೀನ ದಯಾಳ ಪ್ರಶಿಕ್ಷಣ ವರ್ಗ ತರಬೇತಿ ಕಾರ್ಯಕ್ರಮವನ್ನು ದೀನ ದಯಾಳ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

‘ಬಿಜೆಪಿ ದೇಶದ ಅತಿ ದೊಡ್ಡ ರಾಜಕೀಯ ಪಕ್ಷವಾಗಿದ್ದು, ನರೇಂದ್ರ ಮೋದಿ ಅವರು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿದ್ದಾರೆ. 11 ವರ್ಷದಲ್ಲಿ ದೇಶ ಇಡೀ ಜಗತ್ತು ತಿರುಗಿ ನೋಡುವಂತೆ ಪ್ರಗತಿಯತ್ತ ದಾಪುಗಾಲು ಇಟ್ಟಿದೆ. ಬಿಜೆಪಿಗೆ ಕಾರ್ಯಕರ್ತರೇ ದೊಡ್ಡ ಶಕ್ತಿಯಾಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುಸುವ ಹೊಣೆ ಅವರ ಮೇಲಿದೆ’ ಎಂದರು.

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ಕಂಡು ಜನರು ಬೇಸತ್ತಿದ್ದಾರೆ. ಕಾಂಗ್ರೆಸ್ಗೆ ಪಾಠ ಕಲಿಸಲು ಯಾವಾಗ ವಿಧಾನಸಭೆ ಚುನಾವಣೆ ಬರುತ್ತದೆಯೋ ಎಂದು ಕಾಯುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳು ರಾಜ್ಯದಲ್ಲಿ ಕುಂಠಿತವಾಗಿವೆ. ಮುಂಬರುವ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಗೂ ಸಿದ್ಧರಾಗಬೇಕಾಗಿದೆ’ ಎಂದು ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್, ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಬಿ. ಹರಿಕೃಷ್ಣ, ಶಿವಮೊಗ್ಗ ಜಿಲ್ಲಾ ಘಟಕದ ಉಪಾಧ್ಯಕ್ಷೆ ಪದ್ಮಿನಿ, ಮಂಡಲ ಅಧ್ಯಕ್ಷ ಕುಮಾರಸ್ವಾಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-43-432283147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.