ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 23 ನಕಲಿ ಎಂಜಿನಿಯರಿಂಗ್‌ ಕಾಲೇಜು

Last Updated 31 ಜುಲೈ 2018, 16:28 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಮಾನ್ಯತೆ ಪಡೆಯದ 23 ಎಂಜಿನಿಯರಿಂಗ್‌ ಕಾಲೇಜುಗಳಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಮಾನ್ಯತೆ ಪಡೆಯದ 277 ಎಂಜಿನಿಯರಿಂಗ್ ಕಾಲೇಜುಗಳ ಮಾಹಿತಿಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಸತ್ಯಪಾಲ್ ಸಿಂಗ್‌ ಮಂಗಳವಾರ ಲೋಕಸಭೆಗೆ ತಿಳಿಸಿದರು.

ದೆಹಲಿಯಲ್ಲಿ 66, ತೆಲಂಗಾಣದಲ್ಲಿ 35, ಪಶ್ಚಿಮ ಬಂಗಾಳದಲ್ಲಿ 27 , ಕರ್ನಾಟಕದಲ್ಲಿ 23, ಉತ್ತರ ಪ್ರದೇಶದಲ್ಲಿ 22, ಹರಿಯಾಣದಲ್ಲಿ 18, ಮಹಾರಾಷ್ಟ್ರದಲ್ಲಿ 16, ಬಿಹಾರದಲ್ಲಿ 17 ಮತ್ತು ತಮಿಳುನಾಡಿನಲ್ಲಿ 11 ಮತ್ತು ಆಂಧ್ರ ಪ್ರದೇಶದಲ್ಲಿ 7 ಎಂಜಿನಿಯರಿಂಗ್‌ ಕಾಲೇಜುಗಳಿಗೆ ಎಐಸಿಟಿಇ ಮಾನ್ಯತೆ ನೀಡಿಲ್ಲ.

ಮಾನ್ಯತೆ ಪಡೆಯದ ಎಂಜಿನಿಯರಿಂಗ್‌ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಸಂಬಂಧಿಸಿದ ಎಲ್ಲ ರಾಜ್ಯಗಳಿಗೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT