ನವದೆಹಲಿ (ಪಿಟಿಐ): ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾನೂನುಗಳು ಪ್ರಧಾನಿ ನರೇಂದ್ರ ಮೋದಿ ಅವರ ಕೈಗಾರಿಕೋದ್ಯಮಿ ಸ್ನೇಹಿತನಿಗೆ ಮಾತ್ರವೇ ಅನುಕೂಲ ಮಾಡಿಕೊಡಲಿವೆ. ಸ್ವಾತಂತ್ರ್ಯಾ ನಂತರದಲ್ಲಿ ಯಾವತ್ತೂ ಕಾರ್ಮಿಕರ ಹಕ್ಕುಗಳಿಗೆ ಇಷ್ಟೊಂದು ಧಕ್ಕೆಯಾಗಿರಲಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಬಗ್ಗೆ ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಖರ್ಗೆ, ‘ಕಾರ್ಮಿಕ ವಿರೋಧಿಯಾದ ಈ ಕಾನೂನುಗಳನ್ನು ಜಾರಿ ಮಾಡಲು ಅಧಿಸೂಚನೆ ಹೊರಡಿಸುವುದಕ್ಕಾಗಿ ಮೋದಿ ಸರ್ಕಾರವು ವಿಧಾನಸಭೆಗಳಿಗೆ ನಡೆದ ಚುನಾವಣೆ ಫಲಿತಾಂಶ ಹೊರಬರು ವುದನ್ನೇ ಕಾಯುತ್ತಿತ್ತು’ ಎಂದು ದೂರಿದರು.

ಮೇ 8 ಮತ್ತು 9ರಂದು ಕೇಂದ್ರ ಸರ್ಕಾರವು ವಿವಿಧ ಗೆಜೆಟ್ ಅಧಿಸೂಚನೆ ಪ್ರಕಟಿಸಿ, ನಾಲ್ಕು ಕಾರ್ಮಿಕ ಕಾನೂನುಗಳನ್ನು ಜಾರಿಗೆ ತಂದಿದೆ. ‘ಯಾರೊಂದಿಗೂ ಚರ್ಚಿಸದೆಯೇ ಕಾನೂನು ಜಾರಿ ಮಾಡಲಾಗಿದೆ. 2015ರಿಂದ ಈಚೆಗೆ ಒಮ್ಮೆಯೂ ಭಾರತೀಯ ಕಾರ್ಮಿಕ ಸಮಾವೇಶವನ್ನು ಆಯೋಜಿಸಲಿಲ್ಲ’ ಎಂದು ಖರ್ಗೆ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-5556313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.