ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಶಾಂತಿಪಾಲಕರ ವಿರುದ್ಧ ನಡೆಯುವ ಅಪರಾಧಗಳನ್ನು ದಾಖಲಿಸಲು ಹಾಗೂ ಅಪರಾಧಿಗಳನ್ನು ಹೊಣೆಗಾರರನ್ನಾಗಿಸುವ ಕುರಿತು ಮೇಲ್ವಿಚಾರಣೆ ನಡೆಸಲು ಭಾರತವು ಹೊಸ ದತ್ತಾಂಶ ವ್ಯವಸ್ಥೆಯನ್ನು (ಡೇಟಾಬೇಸ್) ಪ್ರಾರಂಭಿಸಿದೆ ಎಂದು ವಿಶ್ವಸಂಸ್ಥೆಯ ಭಾರತದ ಪ್ರತಿನಿಧಿ ರುಚಿರಾ ಕಾಂಬೋಜ್ ಗುರುವಾರ ತಿಳಿಸಿದ್ದಾರೆ.
ಮಂಗಳವಾರ ಭಾರತದ ನೇತೃತ್ವದಲ್ಲಿ ನಡೆದ ‘ಗ್ರೂಪ್ ಆಫ್ ಫ್ರೆಂಡ್ಸ್’ (ಜಿಒಎಫ್) ಉನ್ನತ ಮಟ್ಟದ ಸಭೆಯಲ್ಲಿ ಭಾರತದ ವಿಶ್ವಸಂಸ್ಥೆಯ ರುಚಿರಾ ಹೊಸ ದತ್ತಾಂಶ ವ್ಯವಸ್ಥೆಯನ್ನು ಅನಾವರಣಗೊಳಿಸಿದರು. ಇದು ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ತಿಳಿಸಿದ್ದಾರೆ.
ಶಾಂತಿಪಾಲಕರ ವಿರುದ್ಧ ದುರುದ್ದೇಶಪೂರಿತ ಪ್ರಕರಣಗಳು ದಾಖಲಾಗಿದ್ದರೆ, ಮೇಲ್ವಿಚಾರಣೆ ಮಾಡಲು ಮತ್ತು ಪರಿಹರಿಸಲು ಸಚಿವಾಲಯ, ರಾಯಭಾರ ಕಚೇರಿ ಮತ್ತು ಸದಸ್ಯರಾಷ್ಟ್ರಗಳಿಗೆ ಅಧಿಕಾರ ನೀಡುತ್ತದೆ ಎಂದು ವಿಶ್ವಸಂಸ್ಥೆಗೆ ಭಾರತದ ಪತ್ರಿಕಾ ಪ್ರಕಟಣೆ ತಿಳಿಸಿದೆ.