ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19: ಸಕ್ರಿಯ ಪ್ರಕರಣ 19,613ಕ್ಕೆ ಇಳಿಕೆ

Published 11 ಮೇ 2023, 6:24 IST
Last Updated 11 ಮೇ 2023, 6:24 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,690 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ, ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 21,406 ದಿಂದ 19,613 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 12 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 5,31,736 ಕ್ಕೆ ಏರಿಕೆ ಕಂಡಿದೆ. ಈವರೆಗೆ ದೇಶದ ಕೋವಿಡ್-19 ಪ್ರಕರಣಗಳ ಸಂಖ್ಯೆ ಈಗ 4.49 ಕೋಟಿ (4,49,76,599) ಆಗಿದೆ.

ರಾಷ್ಟ್ರೀಯ ಕೋವಿಡ್‌–19 ಚೇತರಿಕೆ ದರವು ಶೇಕಡಾ 98.77 ರಷ್ಟಿದ್ದು, ಈವರೆಗೆ 4,44,25,250 ಮಂದಿ ಗುಣಮುಖರಾಗಿದ್ದಾರೆ. ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.18 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT