ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 640 ಹೊಸ ಪ್ರಕರಣಗಳು ಪತ್ತೆ

Published 22 ಡಿಸೆಂಬರ್ 2023, 16:20 IST
Last Updated 22 ಡಿಸೆಂಬರ್ 2023, 16:20 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಶುಕ್ರವಾರ ಹೊಸದಾಗಿ 640 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,997ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ಇದರೊಂದಿಗೆ ದೇಶದಲ್ಲಿನ ದಾಖಲಾಗಿದ್ದ ಒಟ್ಟು ಪ್ರಕರಣಗಳ ಸಂಖ್ಯೆ 4.5 ಕೋಟಿಯಾಗಿದ್ದು, 4.44 ಕೋಟಿ ಜನರು ಚೇತರಿಸಿಕೊಂಡಿದ್ದಾರೆ. ಒಟ್ಟು ಚೇತರಿಕೆ ಪ್ರಮಾಣ ಶೇ 98.81ರಷ್ಟಿದೆ. ಒಟ್ಟು 5,33,328 ಲಕ್ಷ ಜನರು ಸತ್ತಿದ್ದು, ಸಾವಿನ ಪ್ರಮಾಣ ಶೇ 1.19ರಷ್ಟಿದೆ ಎಂದು ತಿಳಿಸಿದೆ. 

ಜೆಎನ್‌.1 22 ಪ್ರಕರಣಗಳು: ಡಿ.21ರ ವರೆಗಿನ ಅಂಕಿ ಅಂಶದ ಪ್ರಕಾರ, ದೇಶದಲ್ಲಿ ಕೋವಿಡ್‌ನ ನೂತನ ತಳಿ ಜೆಎನ್‌.1ರ 22 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 21 ಪ್ರಕರಣಗಳು ಗೋವಾ, ಕೇರಳದಲ್ಲಿಯೇ ವರದಿಯಾಗಿವೆ ಎಂದು ಮೂಲಗಳು ತಿಳಿಸಿವೆ.

ಆಸ್ಟ್ರೇಲಿಯಾದಿಂದ ಮರಳಿದ ವ್ಯಕ್ತಿಗೆ ಕೋವಿಡ್: ಆಸ್ಟ್ರೇಲಿಯಾದಿಂದ ಮರಳಿದ್ದ ರಾಜಸ್ಥಾನದ 19 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬರಿಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ. ಆತನ ಕುಟುಂಬ ಸದಸ್ಯರಿಂದಲೂ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ 78 ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 78 ಕೋವಿಡ್ ಪ್ರಕರಣಗಳು ಹೊಸದಾಗಿ ದೃಢಪಟ್ಟಿವೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದೆ. 

24 ಗಂಟೆಗಳಲ್ಲಿ 2,366 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 3.29ರಷ್ಟಿದೆ. ಬೆಂಗಳೂರಿನಲ್ಲಿ ಒಂದು ದಿನದ ಅವಧಿಯಲ್ಲಿ 1,272 ಪರೀಕ್ಷೆ ನಡೆಸಲಾಗಿದ್ದು, ಹೊಸದಾಗಿ 68 ಪ್ರಕರಣ ದೃಢಪಟ್ಟಿದೆ.

ಇದರಿಂದಾಗಿ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳು 156ಕ್ಕೆ ತಲುಪಿದೆ.  

ಸೋಂಕಿತರಲ್ಲಿ 162 ಮಂದಿ ಮನೆ ಆರೈಕೆಗೆ ಒಳಗಾದರೆ, 13 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 6 ಮಂದಿ ತೀವ್ರ ನಿಗಾ ಘಟಕದಲ್ಲಿ, ಉಳಿದ 7 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಇದ್ದಾರೆ.

ಸಂಪುಟ ಉಪ ಸಮಿತಿಗೆ ಸಚಿವ ದಿನೇಶ್ ಗುಂಡೂರಾವ್‌ ನೇತೃತ್ವ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣ ಹಾಗೂ ಅದರ ಕುರಿತು ಪರಾಮರ್ಶೆ ನಡೆಸಲು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ.

ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರನ್ನು ಸಂಪುಟ ಉಪ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಕೋವಿಡ್‌ ನಿಯಂತ್ರಣ ಮತ್ತು ಆ ಕುರಿತು ಪರಿಶೀಲನೆ ನಡೆಸಲು ಸಂಪುಟ ಉಪ ಸಮಿತಿ ರಚಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ
ತೀರ್ಮಾನಿಸಲಾಗಿತ್ತು. ಅದರನ್ವಯ ದಿನೇಶ್‌ ಗುಂಡೂರಾವ್‌ ಅವರ
ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿ ಶುಕ್ರವಾರ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT