ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid 19: ಕಳೆದ 24 ಗಂಟೆಗಳಲ್ಲಿ 656 ಹೊಸ ಪ್ರಕರಣ ದಾಖಲು

Published 24 ಡಿಸೆಂಬರ್ 2023, 8:17 IST
Last Updated 24 ಡಿಸೆಂಬರ್ 2023, 8:17 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 656 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 3,742 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಕೋವಿಡ್‌–19 ಸೋಂಕು ಆರಂಭವಾದಾಗಿನಿಂದ ಈವರೆಗೆ ಒಟ್ಟು 4.50 ಕೋಟಿ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ. ಈವರೆಗೆ 5,33,333 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದೇಶದಲ್ಲಿ ಸೋಂಕಿತರ ಗುಣಮುಖ ಪ್ರಮಾಣ ಶೇ 98.81 ಇದೆ. ಮೃತರ ಪ್ರಮಾಣ ಶೇ 1.19ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂತರ್ಜಾಲ ತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

ಈವರೆಗೂ ದೇಶದಲ್ಲಿ 220.67 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT