‘ಭಾರತದಲ್ಲಿ 2024ರ ನೈರುತ್ಯ ಮುಂಗಾರು ಸೋಮವಾರಕ್ಕೆ ಮುಕ್ತಾಯಗೊಂಡಿದ್ದು, ಈ ಬಾರಿ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಈ ಅವಧಿಯಲ್ಲಿ ದೇಶದಲ್ಲಿ 93.48 ಸೆಂ.ಮೀ ನಷ್ಟು ಮಳೆಯಾಗಿದೆ. ಇದು 2020ರಿಂದ ಈಚೆಗಿನ ದಾಖಲೆ ಮಳೆ ಪ್ರಮಾಣ’ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಭಾರತ, ಮಧ್ಯ ಭಾರತದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಈಶಾನ್ಯ ಭಾಗದಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ. ವಾಯವ್ಯ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಇಲಾಖೆಯು ನೀಡಿದ್ದ ಮುನ್ಸೂಚನೆಯು ನಿಖರವಾಗಿದೆ.