ಕ್ವಾಲಾಲಂಪುರ: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದರು. ನಂತರ, ಭಾರತ ಮತ್ತು ಮಲೇಷ್ಯಾ ಭಾನುವಾರ ರಕ್ಷಣೆ ಮತ್ತು ಭದ್ರತೆ, ಸೆಮಿಕಂಡಕ್ಟರ್ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಹಲವಾರು ಉಪಕ್ರಮಗಳನ್ನು ಘೋಷಿಸಿದವು.

ಭಾರತ ಮತ್ತು ಮಲೇಷ್ಯಾ ವಿಶೇಷ ಸಂಬಂಧವನ್ನು ಹೊಂದಿವೆ. ಎರಡೂ ದೇಶಗಳು ವೈವಿಧ್ಯಮಯ ಕ್ಷೇತ್ರಗಳಲ್ಲಿ ತಮ್ಮ ಸಂಬಂಧಗಳನ್ನು ವಿಸ್ತರಿಸಲು ಬದ್ಧವಾಗಿವೆ ಎಂದು ಮೋದಿ ಹೇಳಿದರು.

ಭಯೋತ್ಪಾದನೆಯನ್ನು ಎದುರಿಸುವ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದರು: ಭಯೋತ್ಪಾದನೆಯ ಕುರಿತು ನಮ್ಮ ಸಂದೇಶ ಸ್ಪಷ್ಟವಾಗಿದೆ; ದ್ವಿಮುಖ ನೀತಿಗಳಿಲ್ಲ, ರಾಜಿ ಇಲ್ಲ ಎಂದಿದ್ದಾರೆ.

ಶನಿವಾರ ಕ್ವಾಲಾಲಂಪುರಕ್ಕೆ ಬಂದ ಮೋದಿಗೆ ಭವ್ಯವಾದ ರೆಡ್ ಕಾರ್ಪೆಟ್ ಸ್ವಾಗತ ನೀಡಲಾಯಿರು. ಪ್ರಧಾನಿ ಇಬ್ರಾಹಿಂ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಭಾರತ ಮತ್ತು ಮಲೇಷ್ಯಾ ವಿಶೇಷ ಸಂಬಂಧವನ್ನು ಹೊಂದಿವೆ. ನಾವು ಕಡಲ ನೆರೆಹೊರೆಯವರು. ಶತಮಾನಗಳಿಂದ, ನಮ್ಮ ಜನರು ಗಾಢ ಸಂಬಂಧಗಳನ್ನು ಹೊಂದಿದ್ದಾರೆ ಎಂದು ಮೋದಿ ಹೇಳಿದರು.

ಇಂದು ಮಲೇಷ್ಯಾ ಭಾರತೀಯ ಮೂಲದ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ವಿಶ್ವದ ಎರಡನೇ ದೇಶವಾಗಿದೆ. ನಮ್ಮ ನಾಗರಿಕತೆಗಳು, ಪರಸ್ಪರ ಹಂಚಿಕೊಂಡಿರುವ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳು ನಮ್ಮನ್ನು ಬೆಸೆದಿವೆ ಎಂದು ಅವರು ಹೇಳಿದ್ದಾರೆ.

ಭಯೋತ್ಪಾದನೆ ನಿಗ್ರಹ, ಗುಪ್ತಚರ ಮಾಹಿತಿ ಹಂಚಿಕೆ ಮತ್ತು ಕಡಲ ಭದ್ರತೆಯಲ್ಲಿ ಎರಡೂ ದೇಶಗಳು ಸಹಕಾರವನ್ನು ಬಲಪಡಿಸುತ್ತಿವೆ ಎಂದು ಮೋದಿ ಹೇಳಿದರು.

ನಾವು ರಕ್ಷಣಾ ಸಹಕಾರವನ್ನು ಹೆಚ್ಚು ಸಮಗ್ರಗೊಳಿಸುತ್ತೇವೆ. ಎಐ ಮತ್ತು ಡಿಜಿಟಲ್ ತಂತ್ರಜ್ಞಾನಗಳ ಜೊತೆಗೆ, ನಾವು ಸೆಮಿಕಂಕ್ಟರ್, ಆರೋಗ್ಯ ಮತ್ತು ಆಹಾರ ಭದ್ರತೆಯಲ್ಲಿ ಪಾಲುದಾರಿಕೆಯನ್ನು ಮುನ್ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.

‘ಇಂಡೊ-ಪೆಸಿಫಿಕ್ ಪ್ರದೇಶವು ವಿಶ್ವದ ಬೆಳವಣಿಗೆಯ ಎಂಜಿನ್ ಆಗಿ ಹೊರಹೊಮ್ಮುತ್ತಿದೆ’ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.