ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉದ್ಯೋಗ ಸೃಷ್ಟಿ | ಜಿ20 ಸದಸ್ಯ ರಾಷ್ಟ್ರಗಳ ಪೈಕಿ ಹಿಂದುಳಿದ ಭಾರತ: ಗೀತಾ ಗೋಪಿನಾಥ್

Published : 17 ಆಗಸ್ಟ್ 2024, 14:59 IST
Last Updated : 17 ಆಗಸ್ಟ್ 2024, 14:59 IST
ಫಾಲೋ ಮಾಡಿ
Comments

ನವದೆಹಲಿ: ‘ಹೊಸ ಉದ್ಯೋಗಾವಕಾಶ ಸೃಷ್ಟಿಸುವಲ್ಲಿ ಜಿ20 ರಾಷ್ಟ್ರಗಳ ಪೈಕಿ ಭಾರತವು ತೀರಾ ಹಿಂದುಳಿದಿದೆ. ದೇಶದ ಜನಸಂಖ್ಯೆ ಬೆಳವಣಿಗೆಗೆ ಅನುಗುಣವಾಗಿ 2030ರ ವೇಳೆಗೆ ಹೆಚ್ಚುವರಿಯಾಗಿ 14.8 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಅಗತ್ಯವಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್‌ ಹೇಳಿದ್ದಾರೆ.

ಶನಿವಾರ ನಡೆದ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನ 'ವಜ್ರ ಮಹೋತ್ಸವ' ಸಮಾರಂಭದಲ್ಲಿ ಮಾತನಾಡಿದ ಅವರು, ‘2010ರಿಂದ ಭಾರತದ ಆರ್ಥಿಕತೆ  ಬೆಳವಣಿಗೆಯು ಸರಾಸರಿ ಶೇ 6.6ರಷ್ಟಿದೆ. ಆದರೆ, ಕಳೆದ ಒಂದು ದಶಕದ ಅವಧಿಯಲ್ಲಿ ಉದ್ಯೋಗ ಬೆಳವಣಿಗೆ ದರವು ಶೇ 2ರಷ್ಟಿದೆ’ ಎಂದು ಹೇಳಿದರು.

ಜಿ20 ರಾಷ್ಟ್ರಗಳ ಉದ್ಯೋಗದ ಬೆಳವಣಿಗೆಯ ದರವನ್ನು ಹೋಲಿಸಿದರೆ ಭಾರತದಲ್ಲಿ ತೀರಾ ಕಡಿಮೆಯಿದೆ ಎಂದರು.

‘ಭಾರತದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಅನುಗುಣವಾಗಿ ಮುಂದಿನ ಆರು ವರ್ಷಗಳಲ್ಲಿ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸುವ ತುರ್ತಿದೆ’ ಎಂದರು.

ದೇಶದ ಜಿಡಿಪಿ ಬೆಳವಣಿಗೆಯ ಶೇ 7ರಷ್ಟಕ್ಕೆ ಅನುಗುಣವಾಗಿ ಖಾಸಗಿ ವಲಯದಲ್ಲಿ ಬಂಡವಾಳ ಹೂಡಿಕೆಯಾಗುತ್ತಿಲ್ಲ. ಹಾಗಾಗಿ, ಈ ವಲಯದಲ್ಲಿ ಹೂಡಿಕೆ ಹೆಚ್ಚಿಸುವ ಅಗತ್ಯವಿದೆ. ಆ ಮೂಲಕ ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕಿದೆ ಎಂದು ಹೇಳಿದರು.

ಪ್ರಸ್ತುತ ಸಾರ್ವಜನಿಕ ವಲಯದಲ್ಲಿನ ಬಂಡವಾಳ ಹೂಡಿಕೆ ಉತ್ತಮವಾಗಿದೆ. ಆದರೆ, ಖಾಸಗಿ ವಲಯದಲ್ಲಿಯೂ ಹೂಡಿಕೆ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಹೇಳಿದರು.

ಭಾರತವು ತನ್ನ ಶೈಕ್ಷಣಿಕ ವ್ಯವಸ್ಥೆಯ ಪುನಶ್ಚೇತನಕ್ಕೆ ಒತ್ತು ನೀಡುವ ಅಗತ್ಯವಿದೆ. ದುಡಿಯುವ ವರ್ಗದ ಜನರ ಕೌಶಲ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ತಿಳಿಸಿದರು.

ವ್ಯಾಪಾರ ಚಟುವಟಿಕೆಗಳ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಬೇಕಿದೆ. ಇದಕ್ಕೆ ಅನುಗುಣವಾಗಿ ತೆರಿಗೆ ಸಂಗ್ರಹದ ಮೂಲವನ್ನು ಮತ್ತಷ್ಟು ವಿಸ್ತರಿಸಬೇಕಿದೆ ಎಂದು ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT