ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇವತ್ತು ಸುಮ್ಮನಿದ್ದೇವೆ, ನಾಳೆ ಅಲ್ಲ.. ಮಮತಾ ಮಾರ್ಮಿಕ ಮಾತು

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾರ್ಮಿಕ ನುಡಿ
Published 9 ಜೂನ್ 2024, 3:16 IST
Last Updated 9 ಜೂನ್ 2024, 3:16 IST
ಅಕ್ಷರ ಗಾತ್ರ

ಕೋಲ್ಕತ್ತ: ಬರುವ ದಿನಗಳಲ್ಲಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರ ಹಿಡಿಯಬಹುದು ಎಂಬ ಸುಳಿವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ್ದಾರೆ.

ಟಿಎಂಸಿ ಸಂಸದರ ಜೊತೆ ಶನಿವಾರ ಸಂಜೆ ಕೋಲ್ಕತ್ತದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಇವತ್ತು ಸರ್ಕಾರ ರಚಿಸುವ ಹಕ್ಕನ್ನು ಕೇಳದಿರಬಹದು. ಆದರೆ, ನಾಳೆ ಕೇಳದೇ ಇರುವುದಿಲ್ಲ ಎಂದು ಮಾರ್ಮಿಕವಾಗಿ‌ ನುಡಿದಿದ್ದಾರೆ.

ಇವತ್ತು ಕೇಂದ್ರದಲ್ಲಿ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ನೀತಿಯಂತೆ ಅಧಿಕಾರ ರಚಿಸುತ್ತಿದೆ. ನೋಡೋಣ ಎಷ್ಟು ದಿನ ಇವರ ಆಟ ನಡೆಯುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಜೆಡಿಯು, ಟಿಡಿಪಿ ಸೇರಿದಂತೆ ಇತರ ಕೆಲವರ ಬೆಂಬಲ ಪಡೆದು ಬಿಜೆಪಿ ನೇತೃತ್ವದ ಎನ್.ಡಿ.ಎ ಕೇಂದ್ರದಲ್ಲಿ ಅಧಿಕಾರ ರಚಿಸುತ್ತಿದೆ. ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT