ನವದೆಹಲಿ: ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿವೆ. ಆದರೆ ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತ ಮತ್ತು ಪಾಕಿಸ್ತಾನ ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸುವ ಬಗ್ಗೆ ಇಂದು ಒಪ್ಪಂದ ಮಾಡಿಕೊಂಡಿವೆ. ಭಯೋತ್ಪಾದನೆಯ ವಿರುದ್ಧ ಭಾರತ ದೃಢ ಮತ್ತು ರಾಜಿಯಾಗದ ನಿಲುವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಭಾರತ– ಪಾಕ್ ಕದನ ವಿರಾಮ

ಇಂದು ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಇಂದು ಮಧ್ಯಾಹ್ನ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು(ಡಿಜಿಎಂಒ) ಭಾರತ ಡಿಜಿಎಂಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
.Indo-Pak Tension: ಭಾರತ– ಪಾಕ್ ಕದನ ವಿರಾಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.