ನವದೆಹಲಿ: ಪಾಕಿಸ್ತಾನದೊಂದಿಗೆ ಸೇನಾ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ ಭಾರತದ ಭದ್ರತಾ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಿಬ್ಬಂದಿಯೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
.India Pakistan Tension: ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ.
ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ಮೂರೂ ಪಡೆಗಳು ಮುಖ್ಯಸ್ಥರ, ಸೇನಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ.

ಭಾರತದ ನೆಲೆಗಳ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ, ಭದ್ರತಾ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ತಿರುಗೇಟು ನೀಡುತ್ತಿವೆ. ಉಭಯ ರಾಷ್ಟ್ರಗಳ ನಡುವೆ ತ್ವೇಷಮಯ ವಾತಾವರಣ ಇದೆ.
.India Pak Tensions: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ.
ಭಾರತದ ಮುಂಚೂಣಿ ನೆಲೆಗಳತ್ತ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ ಎಂದು ಭಾರತ ಗುರುವಾರ ಹೇಳಿದೆ. ಉಭಯ ರಾಷ್ಟ್ರಗಳು ಸೇನಾ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.

‘ಗಡಿ ಪ್ರದೇಶಗಳಿಗೆ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ’ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸೋಫಿಯಾ ಖುರೇಷಿ ತಿಳಿಸಿದ್ದರು.
.India Pakistan Tensions: ಪಿಎಸ್ಎಲ್ ಆತಿಥ್ಯಕ್ಕೆ ದುಬೈ ನಕಾರ ಸಾಧ್ಯತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.