ಪಟ್ನಾ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿನ ಪ್ರಸ್ತುತ ಪರಿಸ್ಥಿತಿ ತುರ್ತು ಪರಿಸ್ಥಿತಿಗಿಂತ ಕೆಟ್ಟದಾಗಿದೆ ಎಂದು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರು ಭಾನುವಾರ ಆರೋಪಿಸಿದ್ದಾರೆ.

ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ‘ಮತ ಅಧಿಕಾರ ಯಾತ್ರೆ’ಗೆ ತೆರಳುವ ಮುನ್ನ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

‘ದೇಶವು ತುರ್ತು ಪರಿಸ್ಥಿತಿಗಿಂತ ಕೆಟ್ಟ ಗಳಿಗೆಯಲ್ಲಿದ್ದು, ನಾವು ಅದರ ವಿರುದ್ಧ ಹೋರಾಡುತ್ತಿದ್ದೇವೆ. ನಮ್ಮೊಂದಿಗೆ ರಾಹುಲ್ ಗಾಂಧಿ ಅವರು ಕೂಡ ಕೈಜೋಡಿಸಿರುವುದು ಒಳ್ಳೆಯ ಬೆಳವಣಿಗೆ’ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವ ಮತ್ತು ದೇಶದ ಸಂವಿಧಾನವನ್ನು ಕಾಪಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಮತದಾನ ಮಾಡುವ ಅವಕಾಶ ನೀಡಿದೆ. ಆದರೆ, ಬಿಜೆಪಿಯು ಅದನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಹಾರದ 20 ಜಿಲ್ಲೆಗಳ 1,300 ಕಿ.ಮೀ ದೂರ, 16 ದಿನಗಳ ಕಾಲ ‘ಮತ ಅಧಿಕಾರ ಯಾತ್ರೆ’ ನಡೆಯಲಿದೆ. ಲಾಲು ಪ್ರಸಾದ್ ಅವರು ತಮ್ಮ ಮಗ ತೇಜಸ್ವಿ ಯಾದವ್ ಜೊತೆಗೆ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.