ಛಿಂದ್ವಾರದಲ್ಲಿ ‘ಕೋಲ್ಡ್ರಿಫ್’ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟಿರುವುದು ಹೃದಯವಿದ್ರಾವಕ. ಮಧ್ಯಪ್ರದೇಶದಲ್ಲಿ ಈ ಸಿರಪ್ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಸಿರಪ್ ತಯಾರಿಸಿರುವ ಕಂಪನಿಯ ಇತರ ಉತ್ಪನ್ನಗಳ ಮಾರಾಟವನ್ನು ಕೂಡ ನಿಷೇಧಿಸಲಾಗುತ್ತದೆ.
– ಮೋಹನ್ ಯಾದವ್, ಮಧ್ಯಪ್ರದೇಶ ಮುಖ್ಯಮಂತ್ರಿ
ಕೆಮ್ಮಿನ ಸಿರಪ್ ಕೋಲ್ಡ್ರಿಫ್ ಕಲಬೆರಕೆಯಾಗಿರುವುದು ಮಾದರಿಗಳ ಪರೀಕ್ಷೆಯಿಂದ ತಿಳಿದುಬಂದಿದ್ದು ಈ ಬಗ್ಗೆ ವಿವರಣೆ ಕೇಳಲಾಗಿದೆ. ಕಂಪನಿಯು ತೃಪ್ತಿಕರ ವಿವರಣೆ ನೀಡುವವರೆಗೆ ಈ ಸಿರಪ್ ಉತ್ಪಾದನೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.
–ತಮಿಳುನಾಡು ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣೆ ಇಲಾಖೆ
ಶಂಕಿತ ಮೂತ್ರಪಿಂಡ ಸಮಸ್ಯೆಯಿಂದಾಗಿ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ 9 ಮಕ್ಕಳು ಮೃತಪಟ್ಟಿವೆ. ಬ್ರೇಕ್ ಆಯಿಲ್ ದ್ರಾವಣ ಮಿಶ್ರಿತ ಕೆಮ್ಮಿನ ಸಿರಪ್ ಕೊಟ್ಟಿದ್ದೇ ಮಕ್ಕಳ ಸಾವಿಗೆ ಕಾರಣ
–ಕಮಲ್ ನಾಥ್, ಕಾಂಗ್ರೆಸ್‌ನ ಹಿರಿಯ ನಾಯಕ
ಕೆಮ್ಮು ನೆಗಡಿ ನಿವಾರಣೆಗಾಗಿ ಬಳಸುವ ಡೆಕ್ಸ್‌ಟ್ರೊಮಿಥೋರ್ಫನ್ ಔಷಧವನ್ನು ನಾಲ್ಕು ವರ್ಷ ಒಳಗಿನ ಮಕ್ಕಳಿಗೆ ನೀಡದಂತೆ ಕೇಂದ್ರ ಸರ್ಕಾರ 2021ರಲ್ಲಿಯೇ ಸಲಹೆ ನೀಡಿದೆ.
–ಗಾಯತ್ರಿ ರಾಥೋರ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಸ್ಥಾನ
ಕೇರಳದಲ್ಲಿ ಕೆಮ್ಮಿನ ಸಿರಪ್ ‘ಕೋಲ್ಡ್ರಿಫ್’ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ. ಕಲುಷಿತಗೊಂಡಿದೆ ಎನ್ನಲಾದ ಬ್ಯಾಚ್‌ನ ಈ ಸಿರಪ್‌ಅನ್ನು ರಾಜ್ಯದಲ್ಲಿ ಮಾರಾಟ ಮಾಡಲಾಗುತ್ತಿರಲಿಲ್ಲ. ಆದಾಗ್ಯೂ ಸುರಕ್ಷತಾ ಕ್ರಮವಾಗಿ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ