ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಪುವಾ ನ್ಯೂಗಿನಿಯಲ್ಲಿ ಭೂಕುಸಿತ | ನೆರವು ನೀಡಲು ಭಾರತ ಸಿದ್ಧ: ಪ್ರಧಾನಿ ಮೋದಿ

Published 28 ಮೇ 2024, 5:03 IST
Last Updated 28 ಮೇ 2024, 5:03 IST
ಅಕ್ಷರ ಗಾತ್ರ

ನವದೆಹಲಿ: ಪಪುವಾ ನ್ಯೂಗಿನಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸಾವಿರಾರು ನಾಗರಿಕರು ಪ್ರಾಣ ಕಳೆದುಕೊಂಡಿದ್ದರ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಭಾರತವು ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಸಿದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಭೂಕುಸಿತದಿಂದಾಗಿ ಪಪುವಾ ನ್ಯೂಗಿನಿಯಲ್ಲಿ ಉಂಟಾದ ಹಾನಿ ಮತ್ತು ನಾಗರಿಕರು ಪ್ರಾಣ ಕಳೆದುಕೊಂಡಿರುವ ವಿಷಯ ಕೇಳಿ ಅತೀವ ದುಃಖವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳವಂತೆ ಪ್ರಾರ್ಥಿಸುತ್ತೇನೆ. ಸಾಧ್ಯವಿರುವ ಎಲ್ಲ ಬೆಂಬಲ ಮತ್ತು ನೆರವನ್ನು ನೀಡಲು ಭಾರತ ಸಿದ್ಧವಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಪಪುವಾ ನ್ಯೂಗಿನಿಯ ಸರ್ಕಾರ ನೀಡಿದ ಮಾಹಿತಿ ಪ್ರಕಾರ, ಭೂಕುಸಿತದಲ್ಲಿ 2,000 ಕ್ಕೂ ಹೆಚ್ಚು ಜನರು ಜೀವಂತವಾಗಿ ಭೂ ಸಮಾಧಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT