ನವದೆಹಲಿ: 2022ನೇ ಸಾಲಿನಲ್ಲಿ ಭಾರತಕ್ಕೆ ವಿದೇಶಿ ಪ್ರವಾಸಿಗರು ಭೇಟಿಯಲ್ಲಿ ಹೆಚ್ಚಳವಾಗಿದ್ದು, 61,90,000 ಪ್ರವಾಸಿಗರು ಭೇಟಿ ನೀಡಿದ್ದಾರೆ. 2021ರ ಇದೇ ಅವಧಿಯಲ್ಲಿ 15,20,000 ಪ್ರವಾಸಿಗರು ಭೇಟಿ ನೀಡಿದ್ದರು ಎಂದು ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಗುರುವಾರ ತಿಳಿಸಿದ್ದಾರೆ.

2019ರಲ್ಲಿ ಕೋವಿಡ್‌ಗೂ ಮೊದಲು 1,09,30,000 ವಿದೇಶಿ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡಿದ್ದರು ಎಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ.

ಬ್ಯೂರೋ ಆಫ್ ಎಮಿಗ್ರೇಷನ್‌ನ ಇತ್ತೀಚಿನ ಮಾಹಿತಿಯ ಪ್ರಕಾರ, ಕೋವಿಡ್ ಸಾಂಕ್ರಾಂಮಿಕದ ನಂತರ ಪ್ರವಾಸೋದ್ಯಮ ಪುನಶ್ಚೇತನಗೊಳ್ಳುತ್ತಿದೆ. ಸಚಿವಾಲಯವು ತನ್ನ ಯೋಜನೆಗಳಾದ ಸ್ವದೇಶ್ ದರ್ಶನ, ತೀರ್ಥಯಾತ್ರೆ ಪುನರುಜ್ಜೀವನ ಮತ್ತು ಆಧ್ಯಾತ್ಮಿಕ ವರ್ಧನೆ ಡ್ರೈವ್ ಅಥವಾ ಪ್ರಸಾದ್‌ಗೆ ಪ್ರವಾಸಿಗರಿಗೆ ಪ್ರವಾಸೋದ್ಯಮ ಅನುಭವವನ್ನು ಉತ್ಕೃಷ್ಟಗೊಳಿಸಲು, ಪ್ರವಾಸೋದ್ಯಮ ಸಂಬಂಧಿತ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಣಕಾಸಿನ ನೆರವು ನೀಡುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.