ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update| ಇಂದು 5,747 ಪ್ರಕರಣ ಪತ್ತೆ: 29 ಸಾವು  

Last Updated 17 ಸೆಪ್ಟೆಂಬರ್ 2022, 5:53 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 5,747 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,45,28,524ಕ್ಕೆ ಏರಿದೆ. ಸದ್ಯ ದೇಶದಲ್ಲಿ 46,848 ಸಕ್ರಿಯ ಪ್ರಕರಣಗಳಿವೆ.

ಒಂದು ದಿನದ ಅವಧಿಯಲ್ಲಿ 29 ಸಾವುಗಳು ವರದಿಯಾಗಿದ್ದು, ಇದರಲ್ಲಿ 13 ಸಾವುಗಳು ಕೇರಳದಿಂದಲೇ ವರದಿಯಾಗಿವೆ. ಒಟ್ಟು ಸಾವಿನ ಸಂಖ್ಯೆ 5,28,302ಕ್ಕೆ ಏರಿದೆ ಎಂಬುದು ಆರೋಗ್ಯ ಇಲಾಖೆ ಮಾಹಿತಿಯಿಂದ ಗೊತ್ತಾಗಿದೆ.

ದೈನಂದಿನ ಪಾಸಿಟಿವಿಟಿ ದರವು ಶೇಕಡ 1.69ರಷ್ಟು ಇದೆ.

ಸಚಿವಾಲಯದ ಪ್ರಕಾರ, ದೇಶದಾದ್ಯಂತ ಕೋವಿಡ್-19 ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 216.41 ಕೋಟಿ ಡೋಸ್‌ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT