ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣಾಚಲ ಪ್ರದೇಶ ನಮ್ಮ 'ಅವಿಭಾಜ್ಯ' ಅಂಗ; ಚೀನಾಗೆ ಭಾರತ ತಿರುಗೇಟು

Last Updated 4 ಏಪ್ರಿಲ್ 2023, 7:29 IST
ಅಕ್ಷರ ಗಾತ್ರ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಹಕ್ಕು ಸಾಧಿಸುವ ಸಲುವಾಗಿ 11 ಸ್ಥಳಗಳ ಹೆಸರು ಬದಲಾವಣೆ ಮಾಡಿರುವ ಚೀನಾದ ಕ್ರಮವನ್ನು ಕೇಂದ್ರ ಸರ್ಕಾರ ಖಂಡಿಸಿದೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗ ಎಂದು ತಿರುಗೇಟು ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಅವರು, 'ನಾವು ಈ ರೀತಿಯ ಹಲವು ವರದಿಗಳನ್ನು ನೋಡಿದ್ದೇವೆ. ಚೀನಾ ಇಂತಹ ಪ್ರಯತ್ನ ಮಾಡಿದ್ದು ಇದೇ ಮೊದಲೇನಲ್ಲ. ನಾವು ಇದನ್ನು ಸಾರಾಸಗಟಾಗಿ ತಿರಸ್ಕರಿಸುತ್ತಿದ್ದೇವೆ. ಅರುಣಾಚಲ ಪ್ರದೇಶವು ಈ ಹಿಂದೆ, ಈಗ ಹಾಗೂ ಎಂದೆಂದೂ ಭಾರತದ ಅವಿಭಾಜ್ಯ ಹಾಗೂ ಬೇರ್ಪಡಿಸಲಾಗದ ಭಾಗ. ಹೊಸದಾಗಿ ಸೃಷ್ಟಿಸಿದ ಹೆಸರುಗಳನ್ನು ಇಡುವುದರಿಂದ ವಾಸ್ತವ ಬದಲಾಗುವುದಿಲ್ಲ' ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಐದು ಶಿಖರಗಳು, ಎರಡು ಭೂ ಪ್ರದೇಶಗಳು, ಎರಡು ವಸತಿ ಪ್ರದೇಶಗಳು ಮತ್ತು ಎರಡು ನದಿಗಳ ಹೆಸರನ್ನು ಬದಲಿಸಿ ಚೀನಾ ಪಟ್ಟಿ ಬಿಡುಗಡೆ ಮಾಡಿದೆ ಎಂದು ‘ಗ್ಲೋಬಲ್ ಟೈಮ್ಸ್‌’ ಸೋಮವಾರ ವರದಿ ಮಾಡಿತ್ತು.

ಅರುಣಾಚಲ ಪ್ರದೇಶದ ಸ್ಥಳಗಳ ಹೆಸರುಗಳನ್ನು ಬದಲಿಸುತ್ತಿರುವುದು ಇದು ಮೂರನೇ ಬಾರಿ. 2018 ಹಾಗೂ 2021ರಲ್ಲಿಯೂ ಇಂತಹದೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT