ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯವನ್ನು ಟೀಕಿಸಿದ್ದ ಪಾಕಿಸ್ತಾನಕ್ಕೆ ಭಾರತವು ಕಟುವಾಗಿ ತಿರುಗೇಟು ನೀಡಿದೆ.

‘ಇದು ಭಾರತದ ಆಂತರಿಕ ವಿಷಯ. ಪಾಕಿಸ್ತಾನ ಹಸ್ತಕ್ಷೇಪ ಮಾಡಬಾರದು. ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸುವುದರಿಂದ ಪಾಕಿಸ್ತಾನ ದೂರ ಇರಬೇಕು’ ಎಂದು ಭಾರತದವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

‘ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಮತ್ತು ಅಲ್ಪಸಂಖ್ಯಾತರಿಗೆ ಧಾರ್ಮಿಕ ಹಕ್ಕುಗಳನ್ನು ನಿರಾಕರಿಸಿರುವ ಪಾಕಿಸ್ತಾನ ಇಂತಹ ಹೇಳಿಕೆ ನೀಡುವುದು ಅಚ್ಚರಿ ಮೂಡಿಸುವುದಿಲ್ಲ’ ಎಂದು ತಿಳಿಸಿದ್ದಾರೆ.

ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದನ್ನು ಪಾಕಿಸ್ತಾನ ಬುಧವಾರ ಟೀಕಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.