ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1.86 ಲಕ್ಷ ಕೋವಿಡ್ ಹೊಸ ಪ್ರಕರಣಗಳು ದೃಢಪಟ್ಟಿದ್ದು, 3,660 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 44 ದಿನಗಳಲ್ಲಿ ಕಡಿಮೆ ಪ್ರಕರಣ ಶುಕ್ರವಾರ 24 ಗಂಟೆಗಳ ಅಂತರದಲ್ಲಿ ದಾಖಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,75,55,457ಕ್ಕೆ ಏರಿಕೆಯಾಗಿದೆ. ಆ ಪೈಕಿ 3,18,895 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 2,48,93,410 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 23,43,152 ಸಕ್ರಿಯ ಪ್ರಕರಣಗಳಿವೆ.
ಕರ್ನಾಟಕದಲ್ಲಿ 4,02,224, ತಮಿಳುನಾಡಿನಲ್ಲಿ 3,13,048, ಮಹಾರಾಷ್ಟ್ರದಲ್ಲಿ 3,03,752, ಆಂಧ್ರಪ್ರದೇಶದಲ್ಲಿ 1,86,782, ಪಶ್ಚಿಮ ಬಂಗಾಳದಲ್ಲಿ 1,17,154, ಒಡಿಶಾದಲ್ಲಿ 1,06,493 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಇದುವರೆಗೆ 20,57,20,660 ಡೋಸ್ ಲಸಿಕೆಯನ್ನು ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಗುರುವಾರದವರೆಗೆ 33,90,39,861 ಕೊರೊನಾ ವೈರಸ್ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.