ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: 743 ಹೊಸ ಪ್ರಕರಣ ದೃಢ, 7 ಸೋಂಕಿತರ ಸಾವು

Published 30 ಡಿಸೆಂಬರ್ 2023, 9:44 IST
Last Updated 30 ಡಿಸೆಂಬರ್ 2023, 9:44 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಇಂದು (ಶನಿವಾರ) 743 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,997ಕ್ಕೆ ಏರಿಕೆಯಾಗಿದೆ. ಜತೆಗೆ ಕೇರಳದಲ್ಲಿ 3, ಕರ್ನಾಟಕದಲ್ಲಿ 2, ಛತ್ತೀಸಗಢ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ.

ಕೋವಿಡ್‌ ಆರಂಭವಾದಾಗಿನಿಂದ ದೇಶದಲ್ಲಿ ದಾಖಲಾಗಿದ್ದ ಒಟ್ಟು ಪ್ರಕರಣಗಳ ಸಂಖ್ಯೆ 4.5 ಕೋಟಿಯಾಗಿದ್ದು, 4.44 ಕೋಟಿ ಜನರು ಚೇತರಿಸಿಕೊಂಡಿದ್ದಾರೆ. ಒಟ್ಟು ಚೇತರಿಕೆ ಪ್ರಮಾಣ ಶೇ 98.81ರಷ್ಟಿದೆ. ಒಟ್ಟು 5,33 ಲಕ್ಷ ಜನರು ಮೃತಪಟ್ಟಿದ್ದು, ಸಾವಿನ ಪ್ರಮಾಣ ಶೇ 1.19ರಷ್ಟಿದೆ.

ದೇಶದಲ್ಲಿ ಇದುವರೆಗೆ 220.67 ಕೋಟಿ ಡೋಸ್ ಕೋವಿಡ್‌ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT