ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 81,466 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 469 ಸೋಂಕಿತರು ಮೃತಪಟ್ಟಿದ್ದಾರೆ ಮತ್ತು 50,356 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,23,03,131 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,63,396 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೂ ಒಟ್ಟು 1,15,25,039 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 6,14,696 ಸಕ್ರಿಯ ಪ್ರಕರಣಗಳಿವೆ. ಈವರೆಗೆ 6.87 (6,87,89,138) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಏ. 01ರ ಹೊತ್ತಿಗೆ ದೇಶದಲ್ಲಿ 24,59,12,587 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಗುರುವಾರ ಒಂದೇ ದಿನ 11,13,966 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಸೋಂಕು ಪ್ರಕರಣಗಳ ಪೈಕಿ ಮೊದಲನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ 28,56,163 ಜನರಿಗೆ ಸೋಂಕು ತಗುಲಿದ್ದು, 3,67,897 ಸಕ್ರಿಯ ಪ್ರಕರಣಗಳಿವೆ. ಈವರೆಗೆ 24,33,368 ಜನರು ಸೋಂಕಿನಿಂದ ಗುಣಮುಖರಾಗಿದ್ದು, 54,898 ಜನರು ಸಾವಿಗೀಡಾಗಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಕೇರಳದಲ್ಲಿ ಒಟ್ಟಾರೆ 11,27,382 ಜನರಿಗೆ ಸೋಂಕು ತಗುಲಿದೆ. 26,511 ಸಕ್ರಿಯ ಪ್ರಕರಣಗಳೊಂದಿಗೆ 10,96,239 ಜನರು ಗುಣಮುಖರಾಗಿದ್ದು, 4,632 ಜನರು ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.