ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಷ್ಯಾದ ರಕ್ಷಣಾ ಸಚಿವ ಆಂಡ್ರೆ ಬೆಲೊಸೊವ್ ಅವರು ಗುರುವಾರ ಮಾತುಕತೆ ನಡೆಸಲಿದ್ದಾರೆ.

ಎಸ್– 400 ಕ್ಷಿಪಣಿ ವ್ಯವಸ್ಥೆಗಳ ಖರೀದಿ, ಸುಖೋಯ್–30 ಎಂಕೆಐ ಯುದ್ಧ ವಿಮಾನಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ರಷ್ಯಾದಿಂದ ಇತರ ಮಿಲಿಟರಿ ಸಾಧನಗಳನ್ನು ಖರೀದಿಸುವುದರಲ್ಲಿ ಭಾರತದ ಆಸಕ್ತಿ ಕುರಿತು ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆ.

ರಷ್ಯಾದಿಂದ ಭಾರತಕ್ಕೆ, ಯುದ್ಧೋಪಕರಣಗಳ ತ್ವರಿತ ಪೂರೈಕೆ ಹಾಗೂ ಎರಡೂ ದೇಶಗಳ ನಡುವಿನ ರಕ್ಷಣೆ ಮತ್ತು ಭದ್ರತಾ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವ ಗುರಿ ಇದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದರು.

ಭಾರತ–ರಷ್ಯಾದ 23ನೇ ವಾರ್ಷಿಕ ಶೃಂಗಸಭೆಗಾಗಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಡಿ.4, 5ರಂದು ಭಾರತಕ್ಕೆ ಭೇಟಿ ನೀಡುತ್ತಿದ್ದು, ಅವರ ನಿಯೋಗದಲ್ಲಿ ಆಂಡ್ರೆ ಬೆಲೊಸೊವ್ ಕೂಡ ಇದ್ದಾರೆ.

ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪುಟಿನ್ ಮಾತುಕತೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.