ನವದೆಹಲಿ: ಭಾರತಕ್ಕೆ ನಿರಂತರ ತೈಲ ಪೂರೈಕೆ ಮಾಡುವುದಾಗಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು (ಶುಕ್ರವಾರ) ಹೇಳಿದ್ದಾರೆ.

ಮಾಸ್ಕೊದಿಂದ ತೈಲ ಖರೀದಿಯನ್ನು ನಿಲ್ಲಿಸುವಂತೆ ಭಾರತದ ಮೇಲೆ ಅಮೆರಿಕ ನಿರಂತರ ಒತ್ತಡ ಹೇರಿತ್ತು.
.ಭಾರತ ತಟಸ್ಥವಾಗಿಲ್ಲ: ರಷ್ಯಾ ಅಧ್ಯಕ್ಷ ಪುಟಿನ್ಗೆ ಮೋದಿ ಹೇಳಿದ್ದೇನು?.ರಾಜ್ಘಾಟ್ಗೆ ಪುಟಿನ್ ಭೇಟಿ: ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಿಷ್ಟು....
ಈ ನಡುವೆ ಭಾರತ ಪ್ರವಾಸದಲ್ಲಿರುವ ಪುಟಿನ್ ಈ ಕುರಿತು ಹೇಳಿಕೆ ನೀಡಿದ್ದು, 'ಭಾರತಕ್ಕೆ ತಡೆರಹಿತವಾಗಿ ಇಂಧನ ಪೂರೈಸಲು ಸಿದ್ಧರಾಗಿದ್ದೇವೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ.

'ವೇಗವಾಗಿ ಬೆಳೆಯುತ್ತಿರುವ ಭಾರತದ ಆರ್ಥಿಕತೆ ಹಾಗೂ ಅಭಿವೃದ್ಧಿಗೆ ಬೇಕಾಗಿರುವ ತೈಲ, ಅನಿಲ, ಕಲ್ಲಿದ್ದಲು ಸೇರಿದಂತೆ ಅಗತ್ಯವಿರುವ ಎಲ್ಲವನ್ನು ಸಾಗಣೆ ಮಾಡಲು ರಷ್ಯಾ 'ವಿಶ್ವಾಸಾರ್ಹ ಪೂರೈಕೆದಾರ' ಆಗಿದೆ' ಎಂದು ಪುಟಿನ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಭಾರತದೊಂದಿಗಿನ ಬದ್ಧತೆಗಾಗಿ ಪುಟಿನ್ ಅವರಿಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. 'ಇಂಧನ ಭದ್ರತೆಯು ಭಾರತ ಹಾಗೂ ರಷ್ಯಾ ಪಾಲುದಾರಿಕೆಯ ದೃಢವಾದ ಆಧಾರಸ್ತಂಭವಾಗಿದೆ' ಎಂದು ಹೇಳಿದ್ದಾರೆ.

ಆಗಸ್ಟ್ನಲ್ಲಿ ರಷ್ಯಾದಿಂದ ತೈಲವನ್ನು ಖರೀದಿಸುತ್ತಿರುವುದಕ್ಕೆ ಪ್ರತಿಯಾಗಿ ಭಾರತದ ಉತ್ಪನ್ನಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೇ 50ರಷ್ಟು ಸುಂಕ ವಿಧಿಸಿದ್ದರು. ಭಾರತವು ತೈಲ ಖರೀದಿ ಮಾಡುವುದರಿಂದ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾಗೆ ಆರ್ಥಿಕ ಸಹಾಯವನ್ನು ಮಾಡುತ್ತಿದೆ ಎಂದು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.