ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ಸಹಕಾರ: ಮೋದಿ -ಸಲ್ಮಾನ್‌ ದ್ವಿಪಕ್ಷೀಯ ಮಾತುಕತೆ, ಭಾರತ–ಸೌದಿ ಒಪ್ಪಂದ ಇಂದು

Published 10 ಸೆಪ್ಟೆಂಬರ್ 2023, 23:30 IST
Last Updated 10 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಮತ್ತು ಸೌದಿ ಅರೇಬಿಯಾ ನಡುವೆ ಸೋಮವಾರ ಇಂಧನ ಸಹಕಾರಕ್ಕೆ ಸಂಬಂಧಿಸಿ ದೀರ್ಘಕಾಲದ ಒಪ್ಪಂದಕ್ಕೆ ಅಂಕಿತ ಬೀಳುವ ನಿರೀಕ್ಷೆಯಿದೆ.

ಜಿ20 ಶೃಂಗಸಭೆಗೆ ಆಗಮಿಸಿದ್ದ ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅವರು ನವದೆಹಲಿಯಲ್ಲಿಯೇ ಇದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ದೊರೆ ಸಲ್ಮಾನ್‌ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಎರಡೂ ಕಡೆಯಿಂದ ಇಂಧನ ಸಹಕಾರ ಒಪ್ಪಂದಕ್ಕೆ ಸಹಿ ಬೀಳುವ ನಿರೀಕ್ಷೆಯಿದೆ. ಅಲ್ಲದೇ, ನವೀಕರಿಸಬಹುದಾದ ಇಂಧನ ಶಕ್ತಿ ಹಾಗೂ ಉಭಯ ದೇಶಗಳ ನಡುವೆ ಸಾಗರದೊಳಗೆ ವಿದ್ಯುತ್‌ ಜಾಲದ ಕೇಬಲ್‌ ಅಳವಡಿಕೆ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ‘ಪ್ರಜಾವಾಣಿ’ಗೆ ಮೂಲಗಳು ತಿಳಿಸಿವೆ.

ಎರಡೂ ದೇಶಗಳ ನಡುವಿನ ರಾಜಕೀಯ, ರಕ್ಷಣೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಹಕಾರಕ್ಕೆ ರಚಿಸಿರುವ ಸಮಿತಿಗಳು, ಆರ್ಥಿಕ ಹಾಗೂ ಹೂಡಿಕೆಯ ಸಹಕಾರಕ್ಕೆ ರಚಿಸಿರುವ ಸಮಿತಿಗಳಿಗೆ ಸಂಬಂಧಿಸಿದಂತೆ ದ್ವಿಪಕ್ಷೀಯ ಕಾರ್ಯತಂತ್ರ ಪಾಲುದಾರಿಕೆ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT