ಕೋಲ್ಕತ್ತಾ: ತನ್ನ ವಿಫಲ ಕಾರ್ಯತಂತ್ರದ ಪ್ರಮಾದಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಅನ್ನು ಗುರಿಯಾಗಿರಿಸಿಕೊಂಡು ಟೀಕೆ ಮಾಡುವುದಕ್ಕೆ ಬದಲಾಗಿ ಕೇಂದ್ರ ಸರ್ಕಾರವು ಚೀನಾವನ್ನು ಹಿಮ್ಮೆಟ್ಟಿಸಲು ಮತ್ತು ಗಾಲ್ವಾನ್ ಕಣಿವೆಯಲ್ಲಿ ಕಳೆದುಕೊಂಡಿರುವ ಭೂಪ್ರದೇಶವನ್ನು ಮರಳಿ ವಶಪಡಿಸಿಕೊಳ್ಳಲು ತಯಾರಿ ನಡೆಸಲಿ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಶುಕ್ರವಾರ ಹೇಳಿದ್ದಾರೆ.

ಪ್ರತೀಕಾರದ ವಿಷಯದಲ್ಲಿ ಮೋದಿ ಸರ್ಕಾರದ ಅಸಮರ್ಥತೆಯ ಲಾಭವನ್ನು ಚೀನಾ ಪಡೆದುಕೊಳ್ಳುತ್ತಿದೆ ಎಂದೂ ಅವರು ಎಚ್ಚರಿಸಿದ್ದಾರೆ.

ಆರೋಪ ಸಾಬೀತು ಮಾಡಿದರೆ ರಾಜೀನಾಮೆ ನೀಡುವೆ

ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಭದ್ರತೆಗೆ ಧಕ್ಕೆಯುಂಟುಮಾಡಿದೆ ಎಂಬ ಆರೋಪವನ್ನು ಸಾಬೀತು ಮಾಡುವಂತೆ ಅವರು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. ಅಲ್ಲದೆ, ಅಂಥ ಆರೋಪಗಳೇನಾದರೂ ಸಾಬೀತಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಅವರು ಘೋಷಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.