‘ಎಲ್ಲ ಸರ್ವಾಧಿಕಾರಿಗಳು ಬಾಂಗ್ಲಾದೇಶ ಎದುರಿಸುತ್ತಿರುವ ಪರಿಸ್ಥಿತಿಯನ್ನೇ ಎದುರಿಸಬೇಕಾಗುತ್ತದೆ ಎಂಬುದನ್ನು ನೆನಪಿನಲ್ಲಿಡಬೇಕು’ ಎಂದು ಅವರು ಹೇಳಿದ್ದಾರೆ.
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಮತ್ತು ಪಲಾಯನ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಾಂಗ್ಲಾದೇಶದಲ್ಲಿ ಹಲವು ವರ್ಷಗಳಿಂದ ಅಶಾಂತಿ ಇದೆ. ನಿರುದ್ಯೋಗವು ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಅಲ್ಲದೆ, ದೇಶದ ಆರ್ಥಿಕ ಸ್ಥಿತಿಯು ತುಂಬಾ ಕೆಟ್ಟದಾಗಿತ್ತು. ಈ ಎಲ್ಲಾ ವಿಷಯಗಳು ಸರ್ಕಾರದ ಪತನಕ್ಕೆ ಕಾರಣವಾಗಿದೆ’ ಎಂದು ಅವರು ಹೇಳಿದರು.
‘ನೆರೆಯ ದೇಶವು ಈ ಬಿಕ್ಕಟ್ಟನ್ನು ನಿವಾರಿಸುತ್ತದೆ ಮತ್ತು ಭಾರತದೊಂದಿಗೆ ಸೌಹಾರ್ದ ಸಂಬಂಧವನ್ನು ಉಳಿಸಿಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು.