ವಿಶ್ವಸಂಸ್ಥೆ: ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದರಿಂದ ಪರಿಣಾಮಗಳು ಉಂಟಾಗುತ್ತವೆ ಎಂಬುವುದನ್ನು ಪಾಕಿಸ್ತಾನ ಒಪ್ಪಿಕೊಳ್ಳಬೇಕು ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಹೇಳಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಮಂಗಳವಾರ ಮಾತನಾಡಿದ ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಅವರು,‘ತನ್ನ ನೆರೆಯ ರಾಷ್ಟ್ರಗಳಿಂದ ನಡೆಯುವ ಭಯೋತ್ಪಾದಕ ದಾಳಿಗಳಿಂದ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕು ಭಾರತಕ್ಕೆ ಇದೆ’ ಎಂದು ಹೇಳಿದರು.

‘ಪಾಕಿಸ್ತಾನವು ಇಂದು ಮಾಡುತ್ತಿರುವ ಆಧಾರರಹಿತ ಹೇಳಿಕೆಗಳಿಗೆ ಉತ್ತರಿಸುವುದು ಭಾರತದ ಕರ್ತವ್ಯವಾಗಿದೆ. ಭಾರತ ಯಾವಾಗಲೂ ಸತ್ಯವನ್ನು ಸ್ಪಷ್ಟಪಡಿಸಲು ಬಯಸುತ್ತದೆ’ ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ಡಾರ್, ಜಮ್ಮು ಮತ್ತು ಕಾಶ್ಮೀರ ವಿಚಾರ, ಸಿಂಧೂ ನದಿ ನೀರು ಒಪ್ಪಂದ ಕುರಿತಾಗಿ ಪ್ರಸ್ತಾಪಿಸಿದರು.

ಪಾಕಿಸ್ತಾನಕ್ಕೆ ತಿರುಗೇಟು ನೀಡಿದ ಪರ್ವತನೇನಿ ಅವರು, ‘ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬಳಸಿಕೊಳ್ಳುತ್ತಿರುವುದು ಮತ್ತು ಸಾವಿರಾರು ಹೊಡೆತಗಳಿಂದ ಭಾರತದಲ್ಲಿ ರಕ್ತಸ್ರಾವ ಮಾಡುವ ಸಿದ್ಧಾಂತವು ಅದರ ಪೊಳ್ಳು ಮಾತು ಮತ್ತು ವಿಶ್ವಸಂಸ್ಥೆಯ ಬಗೆಗಿನ ಅದರ ಪೊಳ್ಳು ಬದ್ಧತೆಯನ್ನು ತೋರಿಸುತ್ತದೆ’ ಎಂದು ಟೀಕಿಸಿದರು.

‘ಸ್ವತಂತ್ರ ಭಾರತವು ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಹೋರಾಟದೊಂದಿಗೆ ತನ್ನ ಬದುಕನ್ನು ಆರಂಭಿಸಿತು. ಪಾಕಿಸ್ತಾನವು ಹುಟ್ಟಿನಿಂದಲೇ ಭಯೋತ್ಪಾದನೆ, ಧಾರ್ಮಿಕ ಉಗ್ರವಾದ, ಭಾರತ ವಿರೋಧಿ ನಿಲುವನ್ನು ರೂಢಿಸಿಕೊಂಡಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.